ಪು ಬಡ್ನಿ-ಆದ್ರಳ್ಳಿ ರಸ್ತೆ ಸಂಪರ್ಕಕ್ಕೆ ತಾತ್ಕಾಲಿಕ ವ್ಯವಸ್ಥೆ

ROAD
ಮಳೆಯಿಂದ ಕಿತ್ತು ಹೋಗಿದ್ದ ಲಕ್ಷ್ಮೇಶ್ವರ ತಾಲೂಕಿನ ಪು.ಬಡ್ನಿ-ಆದ್ರಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ತಾತ್ಕಾಲಿಕ ದುರಸ್ತಿ ಮಾಡಿರುವುದು.
Published on

ಲಕ್ಷ್ಮೇಶ್ವರ: ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದಾಗಿ ಕಿತ್ತುಹೋಗಿದ್ದ ತಾಲೂಕಿನ ಪು.ಬಡ್ನಿ-ಆದ್ರಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ ಸಂಚಾರ ಅವಕಾಶ ಕಲ್ಪಿಸಲಾಗಿದೆ.

ಗ್ರಾಮಗಳ ನಡುವಿನ ಸಂಪರ್ಕ ಕಡಿತಗೊಂಡಿದ್ದರಿಂದ ಶಾಸಕ ಡಾ. ಚಂದ್ರು ಲಮಾಣಿ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಭೇಟಿ ನೀಡಿ ಪರಿಶೀಲಿಸಿ ಶೀಘ್ರವೇ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಹೀಗಾಗಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆಗೆ ಮಣ್ಣು ಹಾಕಿ ಸಂಚಾರಕ್ಕೆ ಅನುವು ಮಾಡಿದ್ದಾರೆ.

ಆದಷ್ಠು ಬೇಗ ಸೇತುವೆ ಮತ್ತು ರಸ್ತೆ ದುರಸ್ತಿಗೊಳಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಸೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net