

ದೇವರಹಿಪ್ಪರಗಿ: ಭಾರತೀಯ ಗ್ರಾಮೀಣ ಕ್ರೀಡೆ ಕಬಡ್ಡಿ ರಾಷ್ಟ್ರೀಯ ಆಟವಾಗಿ ಹೊರಹೊಮ್ಮಿದ್ದು ಹೆಮ್ಮೆಯ ವಿಷಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದು ವೆಂಕಟೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಲಕ್ಷ್ಮಣ ಅಂಗಡಿ ಹೇಳಿದರು.
ಪಟ್ಟಣದ ವೆಂಕಟೇಶ್ವರ ಪದವಿಪೂರ್ವ ಕಾಲೇಜು ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.
ಈಗಿನ ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಆಟವೂ ಕೂಡ ಅಷ್ಟೇ ಪ್ರಮುಖವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಒಂದಲ್ಲ ಒಂದು ಆಟದಲ್ಲಿ ತೊಡಗಿಸಿಕೊಂಡು ಪ್ರತಿಯೊಂದು ಆಟದಲ್ಲಿ ಭಾಗವಹಿಸಿ ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಬೇಕು ಎಂದರು.
ಪದವಿಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಎಸ್.ಎಸ್.ದುರ್ಗಿ, ನಿವೃತ್ತ ಶಿಕ್ಷಕ ಎಸ್.ಎನ್.ಬಸವರೆಡ್ಡಿ ಮಾತನಾಡಿದರು. ಗಣ್ಯರಾದ ಪ್ರಕಾಶ ಮಲ್ಲಾರಿ, ವಿನೋದ ರಾಥೋಡ. ನಾಗರಾಜ ಅಂಗಡಿ, ಪಿ.ಕೆ.ನಾಯಕ, ಶಿವಶರಣ ಪೂಜಾರಿ, ಎಸ್.ಎನ್.ಚವ್ಹಾಣ, ಎಸ್.ಐ.ಮಠ, ಎಸ್.ಡಿ.ಆನೆಗುಂದಿ, ಎಂ.ಎಂ.ಪತ್ತಾರ ಇತರರಿದ್ದರು.