

ಸಿಂಧನೂರು: ನಗರದ ತಾಲೂಕು ಕ್ರೀಡಾಂಗಣದಲ್ಲಿ ಸೆ.15ರಂದು ಶಾಲಾ ಶಿಕ್ಷಣ ಇಲಾಖೆ, ಸ್ವಾಮಿ ವಿವೇಕಾನಂದ ಪಪೂ ಕಾಲೇಜ್ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಪಪೂ ಕಾಲೇಜುಗಳ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಶಶಿಧರ ಹಿರೇಮಠ ತಿಳಿಸಿದರು.
ಇದನ್ನೂ ಓದಿ: ವಿದ್ವತ್ ಪಿಯು ಕಾಲೇಜಲ್ಲಿ ಶಿಕ್ಷಕರ ದಿನಾಚರಣೆ
ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದರು. ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ಉದ್ಘಾಟಿಸುವರು. ಶಾಸಕ ಹಂಪನಗೌಡ ಬಾದರ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸುವರು. ಉದ್ಯಮಿ ರಾಜೇಶ ಹಿರೇಮಠ ಕ್ರೀಡಾಕೂಟ ಜ್ಯೋತಿ ಸ್ವೀಕರಿಸಲಿದ್ದಾರೆ. ಶ್ರೀ ಶಾಂತಮೂರ್ತಿ ಬಸವೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಚಿನ್ನಯ್ಯಸ್ವಾಮಿ ಹಿರೇಮಠ ದಿದ್ದಗಿ ಅಧ್ಯಕ್ಷತೆ ವಹಿಸುವರು.
ಶಾಸಕ ಆರ್.ಬಸನಗೌಡ ತುರ್ವಿಹಾಳ, ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ, ಎಂಎಲ್‌ಸಿಗಳಾದ ಶಶಿಲ್ ಜಿ.ನಮೋಶಿ, ಬಸನಗೌಡ ಬಾದರ್ಲಿ, ಮಾಜಿ ಸಚಿವ ವೆಂಕಟರಾವ ನಾಡಗೌಡ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ನಗರಸಭೆ ಹಂಗಾಮಿ ಅಧ್ಯಕ್ಷೆ ಮಂಜುಳಾ, ನಗರಾಭಿವೃದ್ಧಿ ಅಧ್ಯಕ್ಷ ಬಾಬುಗೌಡ ಬಾದರ್ಲಿ, ಸಹಾಯಕ ಆಯುಕ್ತ ಬಸವಣ್ಣಪ್ಪ ಕಲಶೆಟ್ಟಿ, ತಹಸೀಲ್ದಾರ್ ಅರುಣ್ ದೇಸಾಯಿ ಇತರರು ಭಾಗವಹಿಸುವರು ಎಂದರು.
ಸೆ.16 ರಂದು ಸಂಜೆ ನಡೆಯುವ ಬಹುಮಾನ ವಿತರಣಾ ಸಮಾರಂಭದಲ್ಲಿ ಬಿಜೆಪಿ ಮುಖಂಡ ಕೆ.ಕರಿಯಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಬಾಲಕರ ಪದವಿಪೂರ್ವ ಕಾಲೇಜ್ ಪ್ರಾಚಾರ್ಯ ಶೇಖರಯ್ಯ, ಪಾಟೀಲ್ ಶಿಕ್ಷಣ ಸಂಸ್ಥೆಯ ಆರ್.ಸಿ.ಪಾಟೀಲ್, ಆಕ್ಸ್‌ಫರ್ಡ್ ಕಾಲೇಜ್ ಅಧ್ಯಕ್ಷ ಸತ್ಯನಾರಾಯಣ ಶ್ರೇಷ್ಠಿ ಸೇರಿ ಇತರರು ಪಾಲ್ಗೊಳ್ಳುವರು ಎಂದು ತಿಳಿಸಿದರು. ಖಾಸಗಿ ಕಾಲೇಜ್‌ಗಳ ಆಡಳಿತ ಮಂಡಳಿ ಅಧ್ಯಕ್ಷ ಎನ್.ಸತೀಶ, ಆರ್.ಸಿ.ಪಾಟೀಲ್, ಸತ್ಯನಾರಾಯಣ ಶ್ರೇಷ್ಠಿ, ಅನಿಲ್‌ಕುಮಾರ, ಶೇಖರಯ್ಯಸ್ವಾಮಿ, ಡಿ.ಎಚ್.ಕಂಬಳಿ, ಅನಿಲ್‌ರಾಜ, ಪರಶುರಾಮ ಮಲ್ಲಾಪುರ, ನಾಗರಾಜ, ದೈಹಿಕ ಶಿಕ್ಷಣ ಉಪನ್ಯಾಸಕ ಅಮರೇಶ ತಿಡಿಗೋಳ ಇದ್ದರು.