ಚಿಕ್ಕಪ್ಪನ ಮನೆಗೆ ಹೋಗಿ ಬರುತ್ತೇನೆಂದು ಹೋದ ಪಿಯು ವಿದ್ಯಾರ್ಥಿನಿ ಮರಳಿದ್ದು ಶವವಾಗಿ

Death
Published on

ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಭಾವನಾ(17) ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ. ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರದ ನಿವಾಸಿಯಾಗಿದ್ದ ಭಾವನಾ, ಸಾಗರಕಟ್ಟೆ ಸೇತುವೆಯಿಂದ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಪ್ಪನ ಮನೆಗೆ ಹೋಗಿ ಬರುವುದಾಗಿ ಹೇಳಿ ಭಾವನಾ ಮನೆ ಬಿಟ್ಟಿದ್ದರು. ನಿನ್ನೆ ಸಂಜೆ ಸಾಗರಕಟ್ಟೆ ಹಿನ್ನೀರಿನಲ್ಲಿ ಮೃತದೇಹ ಪತ್ತೆಯಾಗಿದೆ. ಭಾವನಾ ಪಿಯುಸಿಯಲ್ಲಿ ಫೇಲ್ ಆಗಿದ್ದಳು. ಆದರೂ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net