ಪಬ್ ಜಿ ಆಡಿ ಹಣ ಕಳೆದುಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

IMG-20230807-WA0007
Published on

ಕಲಬುರಗಿ : ಪಬ್ ಜಿ ಗೇಮ್ ಆಡಿ ಹಣ ಕಳೆದುಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.

ಪ್ರವೀಣ ಪಾಟೀಲ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೂಲತಃ ಚಿತ್ತಾಪುರ ತಾಲ್ಲೂಕಿನ ಸೂಲಹಳ್ಳಿ ಗ್ರಾಮದ ನಿವಾಸಿಯಾಗಿದ್ದ. ಪೋಷಕರಿಗೆ ಒಬ್ಬನೇ ಪುತ್ರ. ಮನೆಯವರ ಆಕ್ರಂಧನ ಮುಗಿಲು ಮುಟ್ಟಿದೆ.

ಪ್ರವೀಣ ಪಾಟೀಲ್ ನಗರದ ಆಳಂದ ರಸ್ತೆಯಲ್ಲಿ ಇರುವ ದೇವಿ ನಗರದಲ್ಲಿ ಪೋಷಕರೊಂದಿಗೆ ಇರುತ್ತಿದ್ದ, ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರವೀಣ್ ಕಲಬುರಗಿಯ ಖಾಸಗಿ ಕಾಲೇಜಿನಲ್ಲಿ ಬಿಇ ಆರ್ಟಿಫಿಸಿಯಲ್ ಇಂಟಲಿಜೆನ್ಸ್ ಆ್ಯಂಡ್ ಮಷಿನ್ ಲರ್ನಿಂಗ್ ಇಂಜಿನಿಯರಿಂಗ್ ಕೋರ್ಸ್ ಓದುತ್ತಿದ್ದ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಆರ್ ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net