ಮೈಸೂರಿನಲ್ಲಿ ಏ.14 ರಂದು ಸಂವಿಧಾನ ಉಳಿವಿಗೆ ಜನಜಾಗೃತಿ ಸಮಾವೇಶ

prakash raj (FILEminimizer)
Published on

ಮೈಸೂರು: ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ ವತಿಯಿಂದ ಏ.14 ರಂದು ಬೆಳಗ್ಗೆ 11ಕ್ಕೆ ಎಂ.ಜಿ. ರಸ್ತೆಯ ತರಕಾರಿ ಮಾರುಕಟ್ಟೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ ತಿಳಿಸಿದರು.

ಬಹುಭಾಷಾ ನಟ ಪ್ರಕಾಶ್ ರಾಜ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರಂಗಾಯಣ ಮಾಜಿ ನಿರ್ದೇಶಕ ಜನಾರ್ಧನ್ ಜನ್ನಿ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ದಸಂಸ ಪದಾಧಿಕಾರಿಗಳಾದ ಶಂಭುಲಿಂಗಸ್ವಾಮಿ, ಬಿ.ಡಿ. ಶಿವಬುದ್ಧಿ, ಆಲಗೂಡು ಶಿವಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net