ಜೂ.೨೪ ರಂದು ಭೂಪರಿವರ್ತನೆ ಕುರಿತು ಜನಜಾಗೃತಿ

N.U.NACHAPPA
Published on

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ತಕ್ಷಣ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಜೂ.೨೪ ರಂದು ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಿಎನ್‌ಸಿ ವತಿಯಿಂದ ಸೋಮವಾರ ಬೆಳಿಗ್ಗೆ ೧೦.೩೦ ಗಂಟೆಗೆ ಶಾಂತಿಯುತ ಮಾನವ ಸರಪಳಿ ನಿರ್ಮಿಸಿ ಕೊಡವ ಲ್ಯಾಂಡ್‌ನ ರಕ್ಷಣೆಗಾಗಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದ ಅವರು, ಭೂಮಾಫಿಯಾಗಳು ಹಾಗೂ ರಾಜಕೀಯ ಬೆಂಬಲಿತರು ಕೊಡಗಿನ ಕಾವೇರಿ ಜಲಾನಯನ ಪ್ರದೇಶದ ಭೂಮಿಗಳನ್ನು ದೊಡ್ಡ ಮಟ್ಟದಲ್ಲಿ ಖರೀದಿಸುತ್ತಿದ್ದು, ಕಪ್ಪು ಹಣದ ಚಲಾವಣೆಯಾಗುತ್ತಿದೆ. ಬೃಹತ್ ಕಾಫಿ ತೋಟಗಳ ಖರೀದಿಯ ನಂತರ ಅಕ್ಕಪಕ್ಕದ ಸಣ್ಣ ಹಿಡುವಳಿದಾರರ ಭೂಮಿಯನ್ನು ಹಣದ ಆಮಿಷವೊಡ್ಡಿ ಕಬಳಿಸಲಾಗುತ್ತಿದೆ ಎಂದು ದೂರಿದರು.


ಸೋಮವಾರ ಗೋಣಿಕೊಪ್ಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸರ್ವ ಕೊಡವರು ಪಾಲ್ಗೊಂಡು ಕೊಡವ ಲ್ಯಾಂಡ್ ನ ರಕ್ಷಣೆಗಾಗಿ ಒಗ್ಗಟ್ಟು ಪ್ರದರ್ಶಿಸುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net