ಮುಂಡರಗಿಯಲ್ಲಿ ಜನಜಾಗೃತಿ ಕಾರ್ಯಕ್ರಮ

jagruthi
Published on

ಮುಂಡರಗಿ: ಅಳವಂಡಿ ಶ್ರೀ ಸಿದ್ಧೇಶ್ವರ ವಿದ್ಯಾದಾನ ಸಂಸ್ಥಾನದ ಶ್ರೀ ಎಸ್.ಬಿ.ಎಸ್. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಗದಗ ಜಿಲ್ಲಾ ಪೊಲೀಸ್ ಆಶ್ರಯದಲ್ಲಿ ಬುಧವಾರ ಅಂತಾರಾಷ್ಟ್ರೀಯ ಅಕ್ರಮ ಸಾಗಾಣಿಕೆ ಮತ್ತು ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಜಾಗೃತಿ ಕಾರ್ಯಕ್ರಮ ಜರುಗಿತು.

ಮಹಾವಿದ್ಯಾಲಯದ ಪ್ರಧಾನ ಕಾರ್ಯದರ್ಶಿ ಡಾ.ಸಿದ್ದಲಿಂಗ ಇನಾಮದಾರ ಮಾರ್ಗದರ್ಶನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ.ಎಸ್.ಆರ್.ಜಾಗೀರದಾರ ಅಧ್ಯಕ್ಷತೆ ವಹಿಸಿದ್ದರು.

ಪ್ರಾಧ್ಯಾಪಕ ಡಾ.ಹಿತೇಶ್ ಪ್ರಸಾದ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಪಿಎಸ್‌ಐ ಬಿ.ಎನ್.ಯಳವತ್ತಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ಬೋಧಿಸಿದರು. ಎ.ಎಸ್.ಐ ಸುಭಾಷ, ಡಾ.ಕಾಮರಾಜ್ ಮಾತನಾಡಿದರು. ಪ್ರಾಧ್ಯಾಪಕಿ ಸುವರ್ಣಾ ಶೇಟ್ ಸ್ವಾಗತಿಸಿದರು. ವಿದ್ಯಾರ್ಥಿನಿ ಭಾರತಿ ನಿರೂಪಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಡಾ.ಹಾಲಸ್ವಾಮಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net