

ಉಪ್ಪಿನಂಗಡಿ: ನಿವೇಶನ ರಹಿತರು ತಮ್ಮಗ್ರಾಪಂ ವ್ಯಾಪ್ತಿಯಲ್ಲೇ ನಿವೇಶನಕ್ಕೆ ಅರ್ಜಿ ಸಲ್ಲಿಸಬೇಕೆಂಬುದನ್ನು ಬದಲಾಯಿಸಿ ಯಾವ ಗ್ರಾಪಂನಲ್ಲಾದರೂ ಸಲ್ಲಿಸಹುದೆಂದು ನಿಯಮ ರೂಪಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು.
ಪೆರ್ನೆಯಲ್ಲಿ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ಪೆರ್ನೆ ವಲಯ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ನಡೆದ ‘ಬಿಜೆಪಿ ಸುಳ್ಳಿಗೆ ಕಾಂಗ್ರೆಸ್ ಉತ್ತರ’ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೆಎಂಎಫ್‌ಗೆ ಜಾಗ ಮಂಜೂರಾಗಿದೆ. ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣವಾಗಿದೆ, ಮುಂಡೂರಿನಲ್ಲಿ ಕ್ರೀಡಾಂಗಣಕ್ಕೆ ಅನುದಾನ ತರಲಾಗಿದೆ. ಒಂದೂವರೆ ವರ್ಷದಲ್ಲಿ 3,400 ಅಕ್ರಮ ಸಕ್ರಮ ಕಡತಗಳನ್ನು ವಿಲೇವಾರಿ ಮಾಡಲಾಗಿದೆ. ಈ ಕ್ಷೇತ್ರದಲ್ಲಿ ಟೆಂಪಲ್ ಟೂರಿಸಂ ಬೆಳೆಸುವ ಕನಸಿದ್ದು, ಮಹಾಲಿಂಗೇಶ್ವರ ದೇವಾಲಯ ಹಾಗು ಸಹಸ್ರಲಿಂಗೇಶ್ವರ ದೇವಾಲಯಗಳ ಅಭಿವೃದ್ಧಿಗೆ ಯೋಜನೆಗಳೂ ಸಿದ್ದಗೊಂಡು, ಅನುದಾನ ಬಿಡುಗಡೆಯಾಗಿವೆ ಎಂದರು.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನ ನಿಕಟ ಪೂರ್ವಾಧ್ಯಕ್ಷ ಡಾ.ರಾಜಾರಾಂ ಕೆ.ಬಿ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಪೆರ್ನೆ ಸಿಎ ಬ್ಯಾಂಕ್ ಅಧ್ಯಕ್ಷ ತೋಯಜಾಕ್ಷ ಶೆಟ್ಟಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೌಸೀಫ್ ಯು.ಟಿ., ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಪೆರ್ನೆ ಗ್ರಾಪಂ ಅಧ್ಯಕ್ಷೆ ವಿಜಯಾ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಕೋಡಿಂಬಾಡಿ, ಕಾಂಗ್ರೆಸ್ ಉಸ್ತುವಾರಿ ವಿಕ್ರಂ ರೈ ಕೋಡಿಂಬಾಡಿ, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಪೆರ್ನೆ ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಶಾಫಿ ಮತ್ತಿತರರು ಉಪಸ್ಥಿತರಿದ್ದರು.
ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಸುಮಾರು 300 ಎಕರೆ ಜಮೀನನ್ನು ನಿವೇಶನಕ್ಕಾಗಿ ಕಾಯ್ದಿರಿಸಲಾಗಿದ್ದು, 45 ತಿಂಗಳಲ್ಲಿ ಎರಡು ಸಾವಿರ ನಿವೇಶನ ಹಂಚುವ ಕಾರ್ಯವಾಗಲಿದೆ. ಅಶೋಕ್ ಕುಮಾರ್ ರೈ ಶಾಸಕ