

ಮಡಿಕೇರಿ: ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್ಟಿ ವರ್ಗೀಕರಣ ಸೇರಿದಂತೆ ೨೦೨೬ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್‌ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇ? ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾ?ನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಆ.೧೦ ರಂದು ಸುಂಟಿಕೊಪ್ಪದಲ್ಲಿ ೯ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಾನುವಾರ ಬೆಳಿಗ್ಗೆ ೧೦.೩೦ ಗಂಟೆಗೆ ಸುಂಟಿಕೊಪ್ಪದಲ್ಲಿ ಮಾನವ ಸರಪಳಿ ನಿರ್ಮಿಸಿ ಸಾಂವಿಧಾನಿಕ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ತಿಳಿಸಿದ್ದಾರೆ.
೨೦೨೫-೨೬ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ ಸಂಘ ಕ್ಷೇತ್ರದಂತೆಯೇ ೨೦೨೬ ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇ? ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದ್ದಾರೆ.
ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮ ಸುಂಟಿಕೊಪ್ಪದಲ್ಲಿ ಶಾಂತಿಯುತವಾಗಿ ನಡೆಯಲಿದ್ದು, ಕೊಡಗರಹಳ್ಳಿ, ನಾಕೂರು, ಅಂದಗೋವೆ, ಹೊಸಕೋಟೆ, ಕಂಬಿಬಾಣೆ, ಹೊರೂರು, ಕೆದಕಲ್, ಮತ್ತಿಕಾಡ್, ಬೋಯಿಕೇರಿ ಭಾಗದ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.