ಅ.22ರಂದು ಜಲ ಸಂರಕ್ಷಣೆ ಕುರಿತು ಸಾರ್ವಜನಿಕ ಸಂವಾದ

corporater yamuna Rangegowda
ಪರಿಸರ ದಸರಾ ಸಮಿತಿ ಅಧ್ಯಕ್ಷೆ ಯಮುನಾ ರಂಗೇಗೌಡ
Published on

ಶಿವಮೊಗ್ಗ: ಪರಿಸರ ದಸರಾ ಅಂಗವಾಗಿ ಜಲ ಸಂರಕ್ಷಣೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಅ.22ರಂದು ಬೆಳಗ್ಗೆ 11ಕ್ಕೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷೆ ಯಮುನಾ ರಂಗೇಗೌಡ ತಿಳಿಸಿದರು.

ಮುಂಬರುವ ಬೇಸಿಗೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ಹಾಗೂ ದಿನಬಳಕೆಗೆ ಉಪಯೋಗಿಸುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕಾ ದುದು ನಮ್ಮ ಜವಾಬ್ದಾರಿಯಾಗಿದೆ. ಸಾರ್ವಜನಿಕರಿಗೆ ನೀರಿನ ಬಳಕೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಸಾರ್ವಜನಿಕರು ನೀರನ್ನು ಯತೇಚ್ಚವಾಗಿ ಉಪಯೋಗಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಂವಾದ ಕಾರ್ಯಕ್ರಮ ಸಾಕಷ್ಟು ಉಪಯುಕ್ತವಾಗುತ್ತದೆ ಎಂದರು. ಮಹಾನಗರ ಪಾಲಿಕೆ ಆಯುಕ್ತ ಕೆ. ಮಾಯಣ್ಣ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಪ್ರಶ್ನೆಗಳಿಗೆ ಉತ್ತರಿಸುವರು ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ, ಮೇಯರ್ ಎಸ್. ಶಿವಕುಮಾರ್, ಉಪ ಮೇಯರ್ ಲಕ್ಷ್ಮೀ ಶಂಕರ ನಾಯ್ಕ, ಸದಸ್ಯರಾದ ಎಚ್.ಸಿ.ಯೋಗೇಶ್, ಸುರೇಖಾ ಮುರುಳೀಧರ್, ಸುವರ್ಣಾ ಶಂಕರ್ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net