

ಮಂಗಳೂರು: ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎ.ಸದಾನಂದ ಶೆಟ್ಟಿ ಅವರಿಗೆ ಶನಿವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು.
ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ, ವಿಧಾನಸಬೆಯ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿದರು. ಸದಾನಂದ ಶೆಟ್ಟಿಯವರು ನಡೆದು ಬಂದ ಹೆಜ್ಜೆ ಕುರಿತು ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು. ಮುರಳೀಧರ ಕಾಮತ್ ಮತ್ತು ಬಳಗದವರಿಂದ ಸುಗಮ ಸಂಗೀತ ಕಾರ್ಯಕ್ರಮ ನೆರವೇರಿತು.
ಮೇಯರ್ ಜಯಾನಂದ ಅಂಚನ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಕೆ.ಅಭಯಚಂದ್ರ ಜೈನ್, ಉದ್ಯಮಿ ಪಾದೆ ಅಜಿತ್ ರೈ, ಸಂಗೀತ ನಿರ್ದೇಶಕ ಗುರುಕಿರಣ್, ಅಭಿನಂದನಾ ಸಮಿತಿ ಗೌರವಾಧ್ಯಕ್ಷ, ಎಂಆರ್‌ಜಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಕೆ.ಪ್ರಕಾಶ್ ಶೆಟ್ಟಿ, ಶಾಸಕ ಸುರೇಶ ಶೆಟ್ಟಿ ಗುರ್ಮೆ ಮೊದಲಾದವರು ಉಪಸ್ಥಿತರಿದ್ದರು. ಅಭಿನಂದನಾ ಸಮಿತಿ ಅಧ್ಯಕ್ಷ ರವೀಂದ್ರನಾಥ ರೈ ಸ್ವಾಗತಿಸಿದರು. ಕದ್ರಿ ನವನೀತ ಶೆಟ್ಟಿ ಮತ್ತು ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಈಶ್ವರ ಕಟೀಲು ವಂದಿಸಿದರು.