ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆದ್ಯತೆ

15npn2b-Web
ನಿಪ್ಪಾಣಿಯ ಕೋವಿಡ್-19 ಕೇಂದ್ರಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿದರು. ಡಾ. ವಿ.ವಿ. ಶಿಂಧೆ, ತಹಸೀಲ್ದಾರ್ ಪ್ರಕಾಶ ಗಾಯಕವಾಡ, ಸಿಪಿಐ ಸಂತೋಷ ಸತ್ಯನಾಯಿಕ ಇದ್ದರು.
Published on

ನಿಪ್ಪಾಣಿ: ತಾಲೂಕಿನ ಗವಾನ ಗ್ರಾಮಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ನಿರ್ಮಿಸಲಾದ 50 ಹಾಸಿಗೆಗಳ ಕೋವಿಡ್-19 ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕ ಸಭೆಯ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಕ್ಷೇತ್ರದ ಜನರ ಆರೋಗ್ಯದ ಕುರಿತು ಮುನ್ನೆಚ್ಚರಿಕೆ ವಹಿಸುವುದು ನಮ್ಮ ಕರ್ತವ್ಯವಾಗಿದೆ. ಕೋವಿಡ್- 19 ಎಂಬ ಭಯಕಂರ ರೋಗವೊಂದು ಇಡೀ ಸಮಾಜವನ್ನು ಅಲ್ಲೋಲ ಕಲ್ಲೋಲವಾಗಿಸುತ್ತಿರುವ ಈ ಸಮಯದಲ್ಲಿ ಪ್ರಜೆಗಳ ಹಿತಾಸಕ್ತಿ ಕಾಯುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

ತಹಸೀಲ್ದಾರ್ ಪ್ರಕಾಶ ಗಾಯಕವಾಡ, ಪೌರಾಯುಕ್ತ ಮಹಾವೀರ ಬೋರನ್ನವರ, ತಾಲೂಕು ವೈದ್ಯಾಧಿಕಾರಿ ಡಾ. ವಿಠ್ಠಲ ಶಿಂಧೆ, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಸೀಮಾ ಗುಂಜಾಳ, ಸಿಪಿಐ ಸಂತೋಷ ಸತ್ಯನಾಯಿಕ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net