17ರಂದು ಜಿಲ್ಲೆಯಲ್ಲಿ ಜನಾಕ್ರೋಶ ಸಭೆ

Public outcry in the district on the 17th
ಇಳಕಲ್ಲನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿದರು. ಮಹಾಂತಗೌಡ ಪಾಟೀಲ ತೊಂಡಿಹಾಳ, ಮಹಾಂತಪ್ಪ ಚೆನ್ನಿ, ಲಕ್ಷ್ಮಣ ಗುರಂ, ಸುಗೂರೇಶ ನಾಗಲೋಟಿ, ಚಂದ್ರಶೇಖರ ಎರಕಬೋಟೆ ಇದ್ದಾರೆ.
Published on

ಇಳಕಲ್ಲ(ಗ್ರಾ): ಭ್ರಷ್ಟ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ತುಘಲಕ್ ಆಡಳಿತ ನಡೆಸಿದೆ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ವಾಗ್ದಾಳಿ ನಡೆಸಿದರು.

ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲಿನ ದರ ಹಿಡಿದು ಜೀವನಾವಶ್ಯಕ ವಸ್ತುಗಳ ದರ ಏರಿಸಿರುವುದರ ಜತೆಗೆ ಬಸ್ ಟಿಕೆಟ್ ಮತ್ತು ವಿದ್ಯುತ್ ದರ ಏರಿಕೆ ಮಾಡಿ ಜನಸಾಮಾನ್ಯರನ್ನು ಸಂಕಷ್ಟಕ್ಕೀಡು ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲಿ ಜನಾಕ್ರೋಶ ಸಭೆಗಳನ್ನು ನಡೆಸುತ್ತಿದೆ. ಏ.17 ರಂದು ಬಾಗಲಕೋಟೆಯಲ್ಲಿ ಜನಾಕ್ರೋಶ ಸಭೆ ನಡೆಯಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಗ್ರಾಮೀಣ ಭಾಗದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಗಡಿಯಣ್ಣನವರ, ಮಹಾಂತಪ್ಪ ಚೆನ್ನಿ, ಲಕ್ಷ್ಮಣ ಗುರಂ, ಸುಗುರೇಶ ನಾಗಲೋಟಿ, ಚಂದ್ರಶೇಖರ ಎರಕಬೋಟೆ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net