

ಬಾಗಲಕೋಟೆ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ನವನಗರದ ಸೆಕ್ಟರ್ ನಂ. 37ರಲ್ಲಿರುವ ಸಾರ್ವಜನಿಕರ ಉದ್ಯಾನವನವ ಸ್ವಚ್ಛತಾ ಕಾರ್ಯಕ್ರಮ ಜರುಗಿತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕಾರ್ತೀಕ ಆಗ್ರೋ ಇಂಡಸ್ಟ್ರೀಸ್ ಉದ್ದಿಮೆ ಸಹಯೋಗದಲ್ಲಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮದಲ್ಲಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಕಾರ್ಖಾನೆಗಳ ಸಿಬ್ಬಂದಿ ಸೇರಿ 40ಕ್ಕೂ ಹೆಚ್ಚು ಜನ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು.
ಸ್ವಚ್ಛತಾ ಕಾರ್ಯದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಅನೀಲಕುಮಾರ ಚಳಗೇರಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುರೇಶ ತೆಗ್ಗಿ, ಮೆ. ಕಾರ್ತಿಕ್ ಆಗ್ರೋದ ವೈಭವ ಯಾದವ ಹಾಗೂ ಸಿಬ್ಬಂದಿ ಇದ್ದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ನಗನಗರದ ಸೆ. 37ರಲ್ಲಿ ಇರುವ ಸಾರ್ವಜನಿಕ ಉದ್ಯಾನವನ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಅನೀಲಕುಮಾರ ಚಳಗೇರಿ, ಸುರೇಶ ತೆಗ್ಗಿ ಇತರರಿದ್ದರು.