

ವಿಜಯಪುರ : ರಾಜ್ಯ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ವಿಜಯಪುರ ತಾಲೂಕು ಪಂಚಾಯತಿಯ ಸಭಾ ಭವನದಲ್ಲಿ ಜುಲೈ 9 ರಂದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಆಯೋಜಿಸಿರುವ ಸಭೆಯಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ಇನ್ಸಪೆಕ್ಟರ್&1 ಮತ್ತು ಪೊಲೀಸ್ ಇನ್ಸಪೆಕ್ಟರ್&2 ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ ಇನ್ನಿತರ ತೊಂದರೆ ನೀಡುತ್ತಿರುವ ಅಧಿಕಾರಿ& ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ.
ಸ್ಥಳದಲ್ಲಿಯೇ ಪರಿಹಾರಗಳನ್ನು ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳಿಯ ಅಧಿಕಾರಿಗಳ ಸಹಯೋಗದಲ್ಲಿ ಇತ್ಯರ್ಥ ಪಡಿಸಲು ಪ್ರಯತ್ನಿಸಲಾಗುವುದು. ಸರ್ಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ದೂರುಗಳಿಗಾಗಿ ಸ್ಟೇಷನ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಗೆ ಮಾಹಿತಿ ಸಂಪರ್ಕಿಸುವಂತೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.