ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದ ಇಬ್ಬರು ಆರೋಪಿಗಳ ಬಂಧನ

Crime Logo
Published on

ಹಾವೇರಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದ ಇಬ್ಬರು ಆರೋಪಿಗಳನ್ನು ಇಲ್ಲಿಯ ಸೈಬರ್ ಕ್ರೈಂ ಠಾಣೆ ಪೊಲೀಸರು ಶುಕ್ರವಾರ ಸಂಭವಿಸಿದ್ದಾರೆ.
ಹುಬ್ಬಳ್ಳಿಯ ಎಸ್.ಎಂ. ಕೃಷ್ಣ ನಗರದ ಮಹ್ಮದ್‌ಷರೀಫ ಹಜರೇಸಾಬ ಬಂಕಾಪುರ (35) ಹಾಗೂ ತಾಲೂಕಿನ ಕೆರಿಮತ್ತಿಹಳ್ಳಿಯ ಶಿವರಾಜ ಹೊನ್ನಪ್ಪ ಜುಂಬಣ್ಣನವರ (28) ಬಂಧಿತ ಆರೋಪಿಗಳು.
ಇವರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಓಡಾಡುತ್ತಿದ್ದರು. ಈ ನಡುವಳಿಕೆಯಿಂದ ಅನುಮಾನಗೊಂಡ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಇಬ್ಬರು ಗಾಂಜಾ ಸೇವಿಸಿರುವುದು ತಿಳಿದು ಬಂದಿದೆ. ಆದ್ದರಿಂದ ಆರೋಪಿಗಳನ್ನು ಬಂಧಿಸಿ, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net