ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ

mkg1a
Published on

ಹೊನ್ನಾಳಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿರುವುದನ್ನು ನೋಡಿದರೆ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂದೆನಿಸುತ್ತದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ತಾಲೂಕಿನ ಮಾಸಡಿ, ತರಗನಹಳ್ಳಿ, ಸಿಂಗಟಗೆರೆ, ಕುಂದೂರು, ಕೂಲಂಬಿ, ಕೆಂಗಲಹಳ್ಳಿ, ಮುಕ್ತೇನಹಳ್ಳಿ ಗ್ರಾಮದಲ್ಲಿ ಜನಸಂಪರ್ಕ ಅಭಿಯಾನದ ಅಡಿ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರಗಳನ್ನು ಮನೆ ಮನೆಗಳಿಗೆ ವಿತರಿಸಿ ಅವರು ಮಾತನಾಡಿದರು.

ಅನುದಾನ ಬಿಡುಗಡೆ ಮಾಡುವುದಕ್ಕೂ ಕೆಲ ಸಚಿವರು 3ನೇ ವ್ಯಕಿ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿರುವುದು ನೋಡಿದರೆ ಕಾಂಗ್ರೆಸ್ ಸಚಿವರು ಕೇವಲ ಹಣ ಮಾಡಲಿಕ್ಕೆ ಮಾತ್ರ ಮಂತ್ರಿಗಳಾಗಿದ್ದಾರೆ ಎಂದೆನಿಸುತ್ತಿದೆ ಎಂದು ಸರ್ಕಾರವನ್ನು ಟೀಕಿಸಿದರು.

ತೇಪೆ ಹಚ್ಚಲು ನೆಪ ಮಾತ್ರಕ್ಕೆ ಶಾಸಕಾಂಗ ಸಭೆ ಕರೆದಿದ್ದಾರೆ. ಆದರೆ, ಕಾಂಗ್ರೆಸ್ ಶಾಸಕರು ಯಾರು ಯಾರ ಮಾತನ್ನು ಕೇಳುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ. ಸುರೇಶ್, ಜಿಲ್ಲಾ ಉಪಾಧ್ಯಕ್ಷ ನೆಲವೊನ್ನೆ ಮಂಜುನಾಥ್, ಗ್ರಾಪಂ ಸದಸ್ಯರಾದ ಧನಂಜಯ, ರೆಹಮತ್, ಮುಖಂಡರಾದ ಶಾಂತರಾಜ್, ಉದಯ್, ಕಾಂತರಾಜ್, ಹಾಲೇಶ್, ಶರತ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net