ನಾಪೋಕ್ಲು ಠಾಣೆಯಲ್ಲಿ ಜನ ಸಂಪರ್ಕ ಸಭೆ

11.NPK-1
ನಾಪೋಕ್ಲು ಪೊಲೀಸ್ ಠಾಣಾ ಆವರಣದಲ್ಲಿ ಅಪರಾಧ ತಡೆಗಟ್ಟುವ ಬಗ್ಗೆ ಜನಸಂಪರ್ಕ ಸಭೆ ನಡೆಸಲಾಯಿತು.
Published on

ನಾಪೋಕ್ಲು: ಇಲ್ಲಿನ ಪೊಲೀಸ್ ಠಾಣಾ ಆವರಣದಲ್ಲಿ ಅಪರಾಧ ತಡೆಗಟ್ಟುವ ಬಗ್ಗೆ ಜನಸಂಪರ್ಕ ಸಭೆ ನಡೆಸಲಾಯಿತು.

ಮಡಿಕೇರಿ ಉಪವಿಭಾಗದ ಡಿವೈಎಸ್ಪಿ ಸೂರಜ್ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಠಾಣಾಧಿಕಾರಿ ಮಂಜುನಾಥ್ ಫೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಅಪ್ರಾಪ್ತ ಬಾಲಕರ ವಾಹನ ಚಾಲನೆ, ಕುಡಿದು ವಾಹನ ಚಾಲನೆ, ಕಾಫಿ ಖರೀದಿದಾರರಿಗೆ ಸೂಚನೆ, ಅಕ್ರಮ ಮದ್ಯ ಮಾರಾಟ, ಮಾದಕ ವಸ್ತು ಮಾರಾಟ, ಸೇವನೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಅರಿವು ಮೂಡಿಸಿದರು.

ನಾಪೋಕ್ಲು ಪೊಲೀಸ್ ಠಾಣೆಗೆ ಒಳಪಟ್ಟ ಅಂಗಡಿ ಮಾಲೀಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಾಹನ ಚಾಲಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net