ಕೆದಮಳ್ಳೂರು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ

Oplus_16908288
ಕೆದಮಳ್ಳೂರುನಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಉದ್ದೇಶಿಸಿ ಆರ್ಥಿಕ ಸಮಾಲೋಚಕಿ ಮಂಜುಳಾ ಮಿತನಾಡಿದರು.ಮಣಿ, ರಾಕೇಶ್, ಪರಮೇಶ್ವರ ಇದ್ದರು.
Published on

ವಿರಾಜಪೇಟೆ: ಕೊಡಗು ಜಿಲ್ಲಾ ಲೀಡ್ ಬ್ಯಾಂಕ್, ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿರಾಜಪೇಟೆ ಸಹಯೋಗದೊಂದಿಗೆ ತಾಲೂಕಿನ ಕೆದಮಳ್ಳೂರು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಆರ್ಥಿಕ ಸಮಾಲೋಚಕಿ ಮಂಜುಳಾ ಮಾತನಾಡಿ, ಸಾಮಾಜಿಕ ಭದ್ರತೆ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಈ ಕಾರ್ಯಕ್ರಮದಲ್ಲಿ ಕೆದಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒ, ಸದಸ್ಯರು, ಎಸ್‌ಬಿಐ ವ್ಯವಸ್ಥಾಪಕರು, ಸಿಬ್ಬಂದಿ, ಗ್ರಾಮದ ಕಂದಾಯ ಅಧಿಕಾರಿ, ಪಶು ವೈದ್ಯರು, ಕುಡಿಯುವ ನೀರು ನೈರ್ಮಲ್ಯ ಅಧಿಕಾರಿ, ಸೆಸ್ಕ್ ಅಧಿಕಾರಿ, ಅರಣ್ಯಾಧಿಕಾರಿಗಳು, ಅಬಕಾರಿ ಇಲಾಖೆ ಅಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net