

ಮಡಿಕೇರಿ: ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆ ಮಾಡಿಸುವುದರ ಮೂಲಕ ಅದರ ಪ್ರಯೋಜನ ಪಡೆದುಕೊಳ್ಳುವಂತೆ ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ್ ನಾಯಕ್ ಸಲಹೆ ನೀಡಿದರು.
ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಬ್ಯಾಂಕ್ ಆಫ್ ಬರೋಡ ಮರಗೋಡು ಶಾಖೆ ಇವರ ಸಹಯೋಗದೊಂದಿಗೆ ತಾಲೂಕಿನ ಹೊಸ್ಕೇರಿ ಗ್ರಾಮದಲ್ಲಿ ಹೊಸ್ಕೇರಿ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಇತ್ತೀಚೆಗೆ ನಡೆದ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದೆ. ವಾರ್ಷಿಕ ೨೦ ರೂ.ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ ೨ ಲಕ್ಷ ರೂ. ಗಳ ವರೆಗಿನ ವಿಮಾ ಮೊತ್ತವು ಗ್ರಾಹಕರ ನಾಮಿನಿಗೆ ಸಿಗಲಿದೆ. ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆ ಮಾಡಿಸುವುದರ ಮೂಲಕ ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ವಾರ್ಷಿಕವಾಗಿ ೪೩೬ ರೂ.ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ ೨ ಲಕ್ಷ ರೂ. ಗಳ ವಿಮಾಮೊತ್ತ ಸಿಗಲಿದೆ ಎಂದರು ತಿಳಿಸಿದರು.
ವೇದಿಕೆಯಲ್ಲಿ ಅವಾರ್ಡ್ ಸಂಸ್ಥೆಯ ಜಿಲ್ಲಾ ಸಂಯೋಜಕರಾಗಿರುವ ಕೆ.ಎ.ಆಸೀಫ್, ಹೊಸ್ಕೇರಿ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಮತ್ತು ಬ್ಯಾಂಕ್ ಆಫ್ ಬರೋಡ ಮರಗೋಡು ಶಾಖೆಯ ವ್ಯವಸ್ಥಾಪಕರು ಉಪಸ್ಥಿತರಿದ್ದರು.