

ಚನ್ನರಾಯಪಟ್ಟಣ: ತಾಲೂಕಿಗೆ ಜನಸೇವೆ ಮಾಡುವ ಜನಪ್ರತಿನಿಧಿಗಳ ಅವಶ್ಯಕತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಪಟ್ಟಣದ ಶ್ರೀ ಪ್ರಸನ್ನ ಗಣಪತಿ ಆಸ್ಥಾನ ಮಂಟಪದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಎಂ.ಎ. ಗೋಪಾಲಸ್ವಾಮಿ ಯುವ ಬ್ರಿಗೇಡ್ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಎಂ.ಎ. ಗೋಪಾಲಸ್ವಾಮಿ ಜನಸೇವೆಯ ಮಹದಾಸೆಯಿಂದ ರಾಜಕೀಯಕ್ಕೆ ಬಂದವರು. ಜನಸೇವೆ ಮಾಡುವುದು ಹೇಗೆ ಎಂಬುದರ ಬಗ್ಗೆ ಸ್ಪಷ್ಟವಾಗಿ ಯೋಚಿಸಿದವರು. ಜನಸೇವೆಯೇ ಪ್ರಮುಖ ಅಸ್ತ್ರವಾಗಿಸಿ ತಮ್ಮ ಹುಟ್ಟು ಹಬ್ಬದಂದು ಆರೋಗ್ಯ ಶಿಬಿರವನ್ನು ಆಯೋಜಿಸುವ ಮೂಲಕ ತೃಪ್ತಿ ಕಾಣುತ್ತಿದ್ದಾರೆ ಎಂದರು.
ಶಿಬಿರದಲ್ಲಿ ಎಲ್ಲ ವಿಭಾಗಗಳಿಂದ ಸುಮಾರು ಸಾವಿರಕ್ಕೂ ಹೆಚ್ಚು ರೋಗಿಗಳನ್ನು ಪರೀಕ್ಷಿಸಲಾಯಿತು ಸ್ಥಳೀಯರು ಹಾಗೂ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡು, ತಮಗಿರುವ ಆರೋಗ್ಯ ಸಮಸ್ಯೆ ಬಗ್ಗೆ ಬಂದವರಿಗೆಲ್ಲ ವೈದ್ಯರಿಂದ ಪೂರಕ ಸಲಹೆ, ಸೂಚನೆ ಪಡೆದುಕೊಂಡರು. ಲಘು ಉಪಾಹಾರದ ವ್ಯವಸ್ಥೆ ಸಹ ಮಾಡಲಾಗಿತ್ತು.
ಸಂಸದ ಶ್ರೇಯಸ್ ಪಟೇಲ್ ಹಾಗೂ ಶ್ರೀಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಹಾಸನ ಮತ್ತು ಕೊಡಗು ಕಾರ್ಯದರ್ಶಿ ಶ್ರೀ ಶಂಭನಾಥ ಸ್ವಾಮೀಜಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಮಾತನಾಡಿದರು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಆರ್.ಮೂರ್ತಿ, ಹಿರಿಸಾವೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ಅಣತಿ ಆನಂದ್, ಎಚ್.ಕೆ.ಮಹೇಶ್, ಪರಿಸರ ಪ್ರೇಮಿ ಚ.ನಾ. ಅಶೋಕ್, ಆದಿಚುಂಚನಗಿರಿ ಆಸ್ಪತ್ರೆಯ ಆಡಳಿತ ಅಧಿಕಾರಿ ಧರ್ಮೇಂದ್ರ, ಗೀತಾ ಗೋಪಾಲಸ್ವಾಮಿ ಸೇರಿದಂತೆ ಜಿಲ್ಲೆ ಹಾಗೂ ತಾಲೂಕಿನ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.