ಹುಣಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದಿ ವಿ.ಶ್ರೀನಿವಾಸಪ್ರಸಾದ್ ಅವರ ನಿಧನಕ್ಕೆ ಶಾಸಕ ಜಿ.ಡಿ.ಹರೀಶ್‌ಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.
ಶೋಷಿತ ವರ್ಗದ ಧ್ವನಿಯಾಗಿ, ಶಾಸಕರಾಗಿ, ಸಂಸದರಾಗಿ ರಾಜ್ಯ ಮತ್ತು ಕೇಂದ್ರ ಸಚಿವರಾಗಿ ರಾಜಕೀಯ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಜನ ಸೇವೆ ಸದಾ ಸ್ಮರಣೀಯ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಹಿರಿಯರ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.