ಪಂಚ ಗ್ಯಾರಂಟಿ ಯೋಜನೆಗಳ ಕಿರುಪುಸ್ತಕ ಪ್ರಕಟಣೆ ಶೀಘ್ರ

20 Dwd 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ರಾಜ್ಯಕ್ಕೆ ಭೇಟಿ ನೀಡಿದ್ದ ವಿಶ್ವಸಂಸ್ಥೆಯ ತಂಡ ಶ್ಲಾಘಿಸಿದೆ. ಈ ಯೋಜನೆಗಳು ಇತರ ಸರ್ಕಾರಗಳಿಗೆ ಮಾದರಿಯಾಗಿವೆ. ಆಯಾ ಜಿಲ್ಲೆಯಲ್ಲಿ ಯೋಜನೆಗಳ ಕುರಿತು ಸಮಗ್ರ ಮಾಹಿತಿ ಇರುವ ಕಿರುಪುಸ್ತಕ ಪ್ರಕಟಿಸಲು ಸರ್ಕಾರ ಸೂಚಿಸಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬ0ಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಽಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯಾದ್ಯಂತ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿವೆ. ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತ ಕಿರುಪುಸ್ತಕ ಪ್ರಕಟಿಸಲು ಇಲಾಖೆಗಳು ಮಾಹಿತಿ ಸಲ್ಲಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಸಹಾಯಕ ವಾರ್ತಾಧಿಕಾರಿ ಡಾ. ಎಸ್.ಎಂ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಡಾ. ಎಚ್.ಎಚ್. ಕುಕನೂರ, ಹೆಸ್ಕಾಂ ಕಾರ್ಯಪಾಲಕ ಇಂಜಿನಿಯರ್‌ಗಳಾದ ಅರವಿಂದ ಗದಗಕರ ಮತ್ತು ಎಂ.ಟಿ. ಕಾಂಬಳೆ, ಸಾರಿಗೆ ಇಲಾಖೆಯ ಡಾ. ಶಶಿಧರ ಚನ್ನಪ್ಪಗೌಡರ, ಎಚ್. ರಾಮನಗೌಡರ ಹಾಗೂ ಉದ್ಯೋಗ ಮತ್ತು ತರಬೇತಿ ಇಲಾಖೆಯ ಅಽಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net