ಮೇ.23ರಿಂದ ಪಿಯುಸಿ ಪೂರಕ ಪರೀಕ್ಷೆ: ಡಿಸಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿಕೆ

DR. H N GOPALAKRISHNA
Published on

ಮಂಡ್ಯ: ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ವತಿಯಿಂದ ಮೇ.23 ರಿಂದ ಜೂ.3ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳಲ್ಲಿ 7,952 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೇಂದ್ರಗಳಲ್ಲಿ ಮೂಲ ಸೌಕರ್ಯ ಮತ್ತು ಪೀಠೋಪಕರಣಗಳನ್ನು ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀ ಸುತ್ತಳತೆಯಲ್ಲಿ 144 ನೇ ಕಲಂ ಜಾರಿಗೊಳಿಸಲು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮವಹಿಸಬೇಕು. ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಕೇಂದ್ರಗಳಿಗೆ ವಿಚಕ್ಷಣಾ ಜಾಗೃತ ದಳವನ್ನು ರಚಿಸಲಾಗುವುದು. ಕೇಂದ್ರದ ಒಳಗೆ ಕೊಠಡಿ ಮೇಲ್ವಿಚಾರಕರು, ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಡಿಡಿಪಿಐ ಎಸ್.ಟಿ.ಜವರೇಗೌಡ, ಡಿಡಿಪಿಯು ಉಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net