

ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಿ ಗದಗ: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆಗಳು ಏಪ್ರಿಲ್ 24 ರಿಂದ ಮೇ 8 ರವರೆಗೆ ನಡೆಯಲಿದ್ದು ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ತಿಳಿಸಿದರು.
ಪ್ರತಿಬಂಧಕಾಜ್ಞೆ ಜಾರಿ: ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಏಪ್ರಿಲ್ 24 ರಿಂದ ಮೇ 8 ರವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಈ ಪತ್ರಿಬಂಧಕಾಜ್ಞೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಸೂಕ್ತ ಬಂದೋಬಸ್ತ್ ಒದಗಿಸಲು ಪೊಲೀಸ ಇಲಾಖೆಗೆ ಆದೇಶಿಸಲಾಗಿದೆ.