ವಿದ್ಯಾನಿಕೇತನ ಕಾಲೇಜಿನ ವಿದ್ಯಾಲಕ್ಷ್ಮೀ ರಾಜ್ಯಕ್ಕೆ ಪ್ರಥಮ

PUC NEW
Published on

ಹುಬ್ಬಳ್ಳಿ : ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಹುಬ್ಬಳ್ಳಿ ಬೈರಿದೇವರಕೊಪ್ಪದಲ್ಲಿರುವ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ಎ.ವಿದ್ಯಾಲಕ್ಷ್ಮೀ ಅವರು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ವಿದ್ಯಾರ್ಥಿನಿ ವಿದ್ಯಾಲಕ್ಷ್ಮೀ 600 ಅಂಕಗಳಿಗೆ 598 ಅಂಕಗಳನ್ನು ಪಡೆದಿದ್ದಾಳೆ. ಹಿಂದಿ ವಿಷಯ ಹೊರತುಪಡಿಸಿ, ಉಳಿದ ಎಲ್ಲ ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿದ್ದಾಳೆ.

ಕಾಲೇಜಿನ ವತಿಯಿಂದ ವಿದ್ಯಾರ್ಥಿನಿ ವಿದ್ಯಾಲಕ್ಷ್ಮೀಗೆ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಕಾಲೇಜಿನ ಮುಖ್ಯಸ್ಥರಾದ ಅನಿಲಕುಮಾರ ಚೌಗಲಾ ಹಸ್ತಾಂತರಿಸಿದರು. ಕಾಲೇಜಿನ ಪ್ರಾಚಾರ್ಯ ಡಾ. ಆನಂದ ಮುಳಗುಂದ, ಕಾರ್ಯದರ್ಶಿ ಶ್ರೀದೇವಿ ಚೌಗಲಾ, ಗಂಗಾಧರ ಕುಮಡೊಳ್ಳಿ, ಡಾ. ರಮೇಶ ಬಂಡಿವಾಡ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net