ದ್ವಿತೀಯ ಪಿಯು ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಎಂದಿನಿಂದ ಎಲ್ಲಿಯವರೆಗೆ ಎಕ್ಸಾಂ?

Karnataka School Examination And Assessment Board
Published on

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023ನೇ ಸಾಲಿನ ದ್ವಿತೀಯ ಪಿಯು ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 22ರಿಂದ ಜೂ.2ರವರೆಗೆ ಪರೀಕ್ಷೆ ನಡೆಯಲಿವೆ.

ಕೆಲವು ಪರೀಕ್ಷೆಗಳು ಬೆಳಗ್ಗೆ 10.15ರಿಂದ 1.30 ಹಾಗೂ ಮತ್ತೆ ಕೆಲವು ಪರೀಕ್ಷೆ ಮಧ್ಯಾಹ್ನ 2.15ರಿಂದ 5.30ರ ವರೆಗೆ ನಡೆಯಲಿವೆ. ಮೇ 22- ಕನ್ನಡ, ಅರೇಬಿಕ್; ಮೇ 23- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ; ಮೇ 24 - ಇಂಗ್ಲಿಷ್ (ಮಧ್ಯಾಹ್ನ- ಐಟಿ, ರೀಟೈಲ್, ಆಟೋ ಮೋಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್), ಮೇ 25- ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 26- ಇತಿಹಾಸ, ಸಂಖ್ಯಾಶಾಸ್ತ್ರ, ಮೇ 27- ಹಿಂದಿ(ಮಧ್ಯಾಹ್ನ-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್) ಪರೀಕ್ಷೆಗಳು ನಡೆಯಲಿವೆ.

ಮೇ 28ರಂದು ರಜೆ ಇರಲಿದೆ. ಮೇ 29ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ, ಮೇ 30- ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ, ಮೇ 31- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ, ಜೂ.1 ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ, ಜೂ.2- ಅರ್ಥಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net