

ಮೈಸೂರು: ಅದಮ್ಯ ರಂಗಶಾಲೆ, ಸ್ಪಂದನ ಸಾಂಸ್ಕೃತಿಕ ಪರಿಷತ್ ಹಾಗೂ ದಕ್ಷ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಫೆ. 1 ರಂದು ಸಂಜೆ 5 ಗಂಟೆಗೆ ನಗರದ ಹೂಟಗಳ್ಳಿಯಲ್ಲಿರುವ ದಕ್ಷ ಪಿಯು ಕಾಲೇಜಿನ ಸಭಾಂಗಣದಲ್ಲಿ ‘ಪಿಯುಸಿ ಪಠ್ಯಾಧಾರಿತ ನಾಟಕ ಪ್ರದರ್ಶನ’ದ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ.
ರಂಗ ಪ್ರದರ್ಶನದ ಸಮಾರೋಪ ಸಮಾರಂಭವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎನ್.ಎಸ್. ರಾಮೇಗೌಡ ಉದ್ಘಾಟನೆ ಮಾಡಲಿದ್ದು, ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ. ಷಹಸೀನಾ ಬೇಗಂ ಅಧ್ಯಕ್ಷತೆ ವಹಿಸುವರು. ಸ್ಪಂದನ ಸಾಂಸ್ಕೃತಿಕ ಪರಿಷತ್‌ನ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಾಹಿತಿ ಟಿ.ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡುವರು.
‘ಅರುಹು ಕುರುಹು’ ಸಾಹಿತ್ಯ ಮತ್ತು ಸಂಶೋಧನ ಪತ್ರಿಕೆಯ ಸಹ ಸಂಪಾದಕ ಹಾಗೂ ಸಾಹಿತಿ ಡಾ.ಹಾಲತಿ ಸೋಮಶೇಖರ್ ಸಮಾರೋಪ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ದಕ್ಷ ಪಿಯು ಮತ್ತು ಪದವಿ ಕಾಲೇಜಿನ ಅಧ್ಯಕ್ಷ ಡಾ. ಪಿ. ಜಯಚಂದ್ರ ರಾಜು, ದಕ್ಷ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ. ಅಭಿಷೇಕ್ ಪಾಲ್ಗೊಳ್ಳುವರು.
ಇದೇ ಸಂದರ್ಭದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪಠ್ಯವಾಗಿರುವ ಖ್ಯಾತ ಕಥೆಗಾರ ಡಾ. ಬೆಸಗರಹಳ್ಳಿ ರಾಮಣ್ಣ ಅವರ ‘ಗಾಂಧಿ’, ಡಾ. ವೀಣಾ ಶಾಂತೇಶ್ವರ ಅವರ ‘ನಿರಾಕರಣೆ’ ಹಾಗೂ ಪಿ.ಲಂಕೇಶ್ ಅವರ ‘ಮುಟ್ಟಿಸಿಕೊಂಡವನು’, ಡಾ.ಎಚ್.ನಾಗವೇಣಿ ಅವರ ‘ಧಣಿಗಳ ಬೆಳ್ಳಿಲೋಟ’ ಕಥೆಗಳ ರಂಗ ರೂಪ ಪ್ರದರ್ಶನ ನಡೆಯಲಿದೆ ಎಂದು ಅದಮ್ಯ ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.