ವಿಶ್ವಪ್ರವಾದಿಯ ಆದರ್ಶ ಪಾಲನೆಯಿಂದ ಯಶಸ್ಸು: ಸ್ಪೀಕರ್ ಯು.ಟಿ.ಖಾದರ್ ಅನಿಸಿಕೆ

44
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ವಿಶ್ವಪ್ರವಾದಿ ಮುಹಮ್ಮದ್ ಮುಸ್ತಫಾ ಅವರ ಸಂದೇಶಗಳನ್ನು, ಹಿರಿಯರು, ಉಲೆಮಾ-ಉಮರಾಗಳ ಮಾತುಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ಹೋದಲ್ಲಿ ಸರ್ವಜನರ ಪ್ರೀತಿಗೆ ಪಾತ್ರರಾಗಲು ಮತ್ತು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಮೂಡುಬಿದಿರೆ ಪುಚ್ಚಮೊಗರು ಎಲಿಯಾ ದರ್ಗಾದ ಉರುಸ್ ಸಮಾರಂಭ ಪ್ರಯುಕ್ತ ಹಮ್ಮಿಕೊಂಡ ಸರ್ವಧರ್ಮ ಸೌಹಾರ್ದ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಎಲಿಯಾ ಮಸೀದಿ ಕಮಿಟಿ ಅಧ್ಯಕ್ಷ ಅಬ್ದುಲ್ ಮಜೀದ್ ಅಧ್ಯಕ್ಷತೆ ವಹಿಸಿದ್ದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ಕೆಪಿಸಿಸಿ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕ ಫಾರೂಕ್ ಉಳ್ಳಾಲ, ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಎಸ್.ಡಿ.ಪಿ.ಐ. ರಾಜ್ಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಸಿ.ಪಿ.ಐ.ಎಂ. ರಾಜ್ಯ ಕಾರ್ಯದರ್ಶಿ ಯಾದವ ಶೆಟ್ಟಿ, ಮೂಡುಬಿದಿರೆ ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ, ಇರುವೈಲು ಗ್ರಾಪಂ ಅಧ್ಯಕ್ಷ ವಲೇರಿಯನ್ ಕುಟಿನ್ಹಾ, ಸದಸ್ಯರಾದ ಪ್ರದೀಪ್ ಪೂಜಾರಿ, ಎಂ.ಎ.ಅಶ್ರಫ್, ಕೆ.ಪಿ.ಸಿ.ಸಿ. ಸದಸ್ಯ ಚಂದ್ರಹಾಸ ಸನಿಲ್, ಸತೀಶ್ಚಂದ್ರ ಸಾಲ್ಯಾನ್ ಪಾಣಿಲ, ಕೆ.ಡಿ.ಪಿ. ಸದಸ್ಯ ಪ್ರವೀಣ್ ಕುಮಾರ್, ಗ್ರಾ.ಪಂ. ಮಾಜಿ ಸದಸ್ಯ ಕುಮಾರ್ ಪೂಜಾರಿ, ಪತ್ರಕರ್ತ ಅಶ್ರಫ್, ಎಸ್.ಡಿ.ಪಿ.ಐ. ಮೂಡುಬಿದಿರೆ-ಮೂಲ್ಕಿ ಉಪಾಧ್ಯಕ್ಷ ಆಸಿಫ್ ಕೋಟೆಬಾಗಿಲು, ಗ್ರಾ.ಪಂ. ಮಾಜಿ ಸದಸ್ಯ ಮೈಕಲ್ ನೊರೊನ್ಹ, ವಿಜಯಕುಮಾರ್ ಹೆಗ್ಡೆ, ರಾಜೇಶ್ ಪೂಜಾರಿ ಕಾಳೂರು ಅತಿಥಿಗಳಾಗಿದ್ದರು.

ಅಸ್ಸಯ್ಯದ್ ಇಬ್ರಾಹಿಂ ಜುನೈದ್ ಅರ್ರಿಫಾಯಿ ತಂಙಳ್ ಬಾರ್ಕೂರು ದುವಾ ನೆರವೇರಿಸಿದರು. ಮಸೀದಿ ಕಮಿಟಿ ಕೋಶಾಧಿಕಾರಿ ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿ, ಉಪಾಧ್ಯಕ್ಷ ಉಸ್ಮಾನ್ ವಂದಿಸಿದರು. ಡಿ.ಎ.ಉಸ್ಮಾನ್, ನೌಫಲ್ ಕಾರ್ಯಕ್ರಮ ನಿರೂಪಿಸಿದರು.

ಅಸ್ಸಯ್ಯದ್ ಝೈನುಲ್ ಆಬಿದೀನ್ ಜಮಾಲುಲ್ಲೈಲಿ ತಂಙಳ್ ಕಾಜೂರು ನೇತೃತ್ವದಲ್ಲಿ ಸಮಾರೋಪ ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ವಾಗ್ಮಿ ಸಿರಾಜುದ್ದೀನ್ ಖಾಸಿಮಿ ಅವರಿಂದ ಮುಖ್ಯ ಪ್ರಭಾಷಣ ನಡೆಯಿತು. ಮಸೀದಿ ಕಮಿಟಿ ಕಾರ್ಯದರ್ಶಿ ಇಮ್ರಾನ್, ಖಾದರ್,ಕುಞಿಮೋನು, ವಸೀರ್, ಇಸ್ಮಾಯಿಲ್ ಮತ್ತಿತರರು ಉಪಸ್ಥಿತರಿದ್ದರು.

ಎಲ್ಲಿ ಸಂಶಯ ಇರುತ್ತದೋ ಅಲ್ಲಿ ಸೌಹಾರ್ದ ಕಾಣಲು ಸಾಧ್ಯವಿಲ್ಲ. ಸೌಹಾರ್ದ ಇರುವಲ್ಲಿ ಸಂಶಯವಿರುವುದಿಲ್ಲ. ಮುಂದಿನ ಯುವ ಜನಾಂಗ ನಮ್ಮಲ್ಲಿರುವ ಸೌಹಾರ್ದವನ್ನು ಹಿರಿಯರಂತೆಯೇ ಉಳಿಸಿಕೊಂಡು ಜೀವನ ನಡೆಸಬೇಕು. ಡಾ.ಎಂ.ಮೋಹನ ಆಳ್ವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ https://www.vijayavani.net/sri-mantramurthy-guliga-kola-in-upleri https://www.vijayavani.net/brahma-kalashotsava

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net