ಪುನರಾವರ್ತನೆಯಿಂದ ಕಲಿಕಾಮಟ್ಟ ಹೆಚ್ಚಳ : ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ವೀರು ಶೆಟ್ಟಿ ಅನಿಸಿಕೆ

sdm (1)
ವೀರು ಶೆಟ್ಟಿ ಶಾಲಾ ಆರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಿವೃತ್ತ ಮುಖ್ಯಶಿಕ್ಷಕ ಜಿ.ಶ್ರೀಧರನ್ ನಾಯರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ಮೊದಲಾದವರಿದ್ದರು.
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಈ ವರ್ಷ ಎಲ್ಲ ವಿದ್ಯಾರ್ಥಿಗಳು ಶಾಲೆಯಲ್ಲಿ ಉತ್ತಮ ರೀತಿಯಲ್ಲಿ ಕಲಿತು ಶಾಲೆಗೆ ಒಳ್ಳೆಯ ಹೆಸರನ್ನು ತರುವ ವಿದ್ಯಾರ್ಥಿಗಳಾಗಬೇಕು. ಶಿಕ್ಷಕರು ಹೇಳಿಕೊಟ್ಟ ಪಾಠಗಳನ್ನು ಪಾಲಕರು ಮನೆಯಲ್ಲಿ ಪುನರಾವರ್ತನೆಗೊಳಿಸಿದಾಗ ಮಗುವಿನ ಕಲಿಕಾಮಟ್ಟ ಇನ್ನಷ್ಟು ಹೆಚ್ಚಾಗಲು ಸಾಧ್ಯವಿದೆ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಹಾಗೂ ಈ ಕ್ಷೇತ್ರದ ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ವೀರು ಶೆಟ್ಟಿ ಹೇಳಿದರು.

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವದಲ್ಲಿ ಮಾತನಾಡಿದರು.
ಖಾವಂದರು ಶಾಲೆಗೆ ಬೇಕಾದ ಎಲ್ಲ ಮೂಲಸವಲತ್ತು ಒದಗಿಸಿಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಶಾಲೆಗೆ ಹೆಸರನ್ನು ತರುವಂತ ವಿದ್ಯಾರ್ಥಿಗಳಾಗಿ ಎಂದರು.

ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲಾಯಿತು. ನಿವೃತ್ತ ಮುಖ್ಯಶಿಕ್ಷಕ ಜಿ.ಶ್ರೀಧರನ್ ನಾಯರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಶೀನಪ್ಪ ಗೌಡ ಸ್ವಾಗತಿಸಿ, ಶಿಕ್ಷಕ ಪವನ್ ಕುಮಾರ್ ವಂದಿಸಿ, ಶಿಕ್ಷಕ ನಿಶಾಂತ್ ಕುಮಾರ್ ನಿರೂಪಿಸಿದರು. ವೀರು ಶೆಟ್ಟಿ ವತಿಯಿಂದ, ಆಡಳಿತ ಮಂಡಳಿ ವತಿಯಿಂದ, ಶ್ರೀ ಕ್ಷೇತ್ರ ಧರ್ಮಸ್ಥಳದ ಸುರೇಂದ್ರ ಕುಮಾರ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net