ಕೃಷ್ಣರಾಜಸಾಗರ ಅಣೆಕಟ್ಟೆ ಭರ್ತಿ: ಬಿಜೆಪಿ ಕಾರ್ಯಕರ್ತರಿಂದ ಕಾವೇರಿ ಮಾತೆ ಪ್ರತಿಮೆಗೆ ಪೂಜೆ

Puja to Kaveri Mathe statue mandya
Published on

ಮಂಡ್ಯ: ಕೃಷ್ಣರಾಜಸಾಗರ ಅಣೆಕಟ್ಟೆ ಭರ್ತಿಯಾದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರಿನ ಕಾವೇರಿ ಉದ್ಯಾನದಲ್ಲಿರುವ ಕಾವೇರಿ ಮಾತೆ ಪ್ರತಿಮೆಗೆ ಆರತಿ ಪೂಜೆ ಸಲ್ಲಿಸಲಾಯಿತು. ಬಿಜೆಪಿ ಗ್ರಾಮಾಂತರ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರಾಧ್ಯ ಮಾತನಾಡಿ, ರೈತರ ಜೀವನಾಡಿ ಮೈದುಂಬಿ ಹರಿಯುತ್ತಿರುವ ಕಾವೇರಿ ಮಾತೆಗೆ ರೈತರ ಪರವಾಗಿ ಕಾವೇರಿ ಆರತಿ ಪೂಜೆ ಸಲ್ಲಿಸಿದ್ದೇವೆ. ರಾಜ್ಯ ಸರ್ಕಾರ ಕಾವೇರಿ ಆರತಿ ಮಾಡಲಿ ಉತ್ತಮ. ಆದರೆ ಮೇಕೆದಾಟು ಯೋಜನೆ ಮರೆಯಬೇಡಿ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಮೇಕೆದಾಟು ಯೋಜನೆ ಮಾಡುತ್ತೇವೆ ಎಂದು ಪಾದಯಾತ್ರೆ ಮಾಡಿ ಅಧಿಕಾರಕ್ಕೆ ಬಂದು 1 ವರ್ಷ ಆಗುತ್ತಿವೆ. ಇನ್ನೂ ಯೋಜನೆ ಬಗ್ಗೆ ಯಾವುದೇ ರೂಪರೇಷೆ ಕಾಣದಾಗಿದೆ ಎಂದು ಹೇಳಿದರು.

ಕಾರ್ಯಕರ್ತರಾದ ಹೊಸಹಳ್ಳಿ ಶಿವು, ಪ್ರಸನ್ನ, ಚಂದ್ರ, ಮಹೇಶ್, ಶಿವಲಿಂಗು, ನಂದೀಶ್, ಮನೋಹರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net