ಮಕ್ಕಳ ಆರೋಗ್ಯಕ್ಕಾಗಿ ಲಸಿಕಾ ಅಭಿಯಾನ

31bdvt1
Published on

ಭದ್ರಾವತಿ: ಹಳೇನಗರದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ರೋಟರಿ ಕ್ಲಬ್ ಸಹಯೋಗದೊಂದಿಗೆ ಏರ್ಪಡಿಸಿದ್ದ ಪಲ್ಸ್ ಪೋಲೀಯೊ ಲಸಿಕೆ ಅಭಿಯಾನಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಮಕ್ಕಳು ಆರೋಗ್ಯವಾಗಿರಬೇಕೆಂಬ ಉದ್ದೇಶದಿಂದ ಪೋಲಿಯೋ ಹನಿ ಹಾಕಲಾಗುತ್ತಿದ್ದು ಪಾಲಕರು ತಮ್ಮ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಮರೆಯದಂತೆ ಲಸಿಕೆ ಹಾಕಿಸá-ವ ಮೂಲಕ ಪೋಲಿಯೋ ಮುಕ್ತ ದೇಶವನ್ನಾಗಿಸಲು ಮುಂದಾಗಬೇಕು ಎಂದರು.

ಭದ್ರಾವತಿ ಸಾರ್ವಜನಿಕ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ರೋಗಿಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದನೆ ಮಾಡುತ್ತಿದ್ದು ಇದೇ ರೀತಿ ಸಾರ್ವಜನಿಕರಿಂದ ಯಾವುದೇ ದೂರು ಬಾರದಂತೆ ಸೇವೆ ಮುಂದುವರಿಸಿಕೊಂಡು ಹೋಗುವಂತೆ ಸೂಚಿಸಿದರು.

ಟಿಎಚ್​ಒ ಡಾ. ಅಶೋಕ್ ಮಾತನಾಡಿ, ನಗರ ಹಾಗೂ ಗ್ರಾಮೀಣ ಭಾಗ ಸೇರಿ ತಾಲೂಕಿನಲ್ಲಿ 167 ಬೂತ್ ತೆರೆಯಲಾಗಿದ್ದು 26,908 ಮಕ್ಕಳು ಇದರ ಪ್ರಯೋಜನ ಪಡೆಯಲಿದ್ದಾರೆ. 4 ದಿನಗಳ ಅವಧಿಯಲ್ಲಿ ಲಸಿಕೆ ಹಾಕುವ ಕಾರ್ಯಕ್ರಮ ಮುಗಿಯಲಿದೆ. ಕರೊನಾ ಲಸಿಕೆಯನ್ನು ಈಗಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿಗೆ ನೀಡಲಾಗುತ್ತಿದ್ದು ಲಸಿಕೆ ಪಡೆದ ಎಲ್ಲರೂ ಆರೋಗ್ಯವಾಗಿದ್ದಾರೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದರು.

ಆಸ್ಪತ್ರೆ ವೈದ್ಯಾಧಿಕಾರಿ ಡಾ. ಒ.ಮಲ್ಲಪ್ಪ. ಡಾ. ಶಿವಪ್ರಕಾಶ್. ಸಿಡಿಪಿಒ ಸುರೇಶ್, ತಾಪಂ ಇಒ ತಮ್ಮಣ್ಣ ಗೌಡ, ರೋಟರಿ ಅಧ್ಯಕ್ಷ ಶಾಂತಕುಮಾರ್, ಗಿರೀಶ್, ಆದರ್ಶ, ರವಿಕುಮಾರ್, ವಿಪುಲಾ, ಸುಂದರಬಾಬು, ಆನಂದ್, ವಸಂತ್ ರಮಾನಾಥ್, ಶಿವಲಿಂಗೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net