ಅಟೋರಿಕ್ಷಾ ಪಲ್ಟಿ - ಚಾಲಕ ಸಾವು

PTR_14 JUNE_1
Published on

ವಿಟ್ಲ: ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿ ಆಟೋರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ.

ರಿಕ್ಷಾ ಚಾಲಕ ಜಗನ್ನಾಥ ಪೈಸಾರಿ(57) ಮೃತಪಟ್ಟಿದ್ದಾರೆ. ಮಂಗಳವಾರ ಮಧ್ಯಾಹ್ನ ಊಟ ಮುಗಿಸಿದ ಬಳಿಕ ಪುಣಚದ ಅಟೋರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಮಣಿಲ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಅಟೋರಿಕ್ಷಾ ರಸ್ತೆಗೆ ಪಲ್ಟಿಯಾಗಿ ಬಿದ್ದ ಕಾರಣ, ತಲೆಗೆ ಗಂಭೀರ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ.

ತುಳು ನಾಟಕ ರಂಗದಲ್ಲಿ ಹಾಸ್ಯ ಅಭಿನಯದ ಮೂಲಕ ಮಿಂಚಿದ್ದ ಅವರು, ಕಳೆದ ಮೂವತ್ತು ವರ್ಷಗಳಿಂದ ಆಟೋರಿಕ್ಷಾ ಚಾಲಕರಾಗಿ’ರಿಕ್ಷಾ ಜಗ್ಗಣ್ಣ’ಎಂದೇ ಗುರುತಿಸಲ್ಪಟ್ಟಿದ್ದರು. ಪತ್ನಿ, ಪುತ್ರ ಪುತ್ರಿಯನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net