ಭೀಕರ ಅಪಘಾತ - ಮಹಿಳೆ ಮನೆಯೊಳಗೆ ಲಾಕ್!

ಮನೆಯ ಮೇಲೆ ಬಿದ್ದಿರುವ ಪಿಕಪ್
ಮನೆಯ ಮೇಲೆ ಬಿದ್ದಿರುವ ಪಿಕಪ್
Published on

ವಿಟ್ಲ: ಪರಿಯಲ್ತಡ್ಕ - ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.

ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ. ಮನೆಯ ಒಳಗೆ ಮಹಿಳೆ ಮಲಗಿದ್ದ ಸಂದರ್ಭ ಘಟನೆಯಾಗಿದ್ದು, ಗಂಭೀರ ಪರಿಸ್ಥಿಯಲಿದ್ದಾರೆ. ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net