

ವಿಟ್ಲ: ಪುಣಚ ದೇವಿನಗರ ಶ್ರೀದೇವಿ ವಿದ್ಯಾಕೇಂದ್ರದ ೨೦೨೪-೨೫ನೇ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೧೦೦ ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಶಾಲೆಯಲ್ಲಿ ಸೋಮವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ದೇವಾಲಯ ಸಂವರ್ಧನಾ ಸಮಿತಿ ಮಂಗಳೂರು ವಿಭಾಗದ ವಿಭಾಗ್ ಪ್ರಮುಖ್ ಮುಳಿಯ ಕೇಶವ ಪ್ರಸಾದ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಶಾಲೆ ಇರುವುದೇ ಊರಿನ ಭಾಗ್ಯ. ಸಂಸ್ಥೆಯ ಸ್ಥಾಪನೆಗೆ ಕಾರಣರಾದ ಹಿರಿಯರ ಆಶಯ ಹಾಗೂ ಈಗ ಈ ಸಂಸ್ಥೆಯನ್ನು ಮುನ್ನಡೆಸುತ್ತಿರುವ ಆಡಳಿತ ಮಂಡಳಿಯ ಶ್ರಮ ಶ್ಲಾಘನೀಯ ಎಂದರು.
ಎಂ.ಆರ್.ಪಿ.ಎಲ್. ಹಣಕಾಸು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಮಹೇಶ್ ಬಿ. ಮಾತನಾಡಿದರು.
ವಿದ್ಯಾ ಕೇಂದ್ರಕ್ಕೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ತಿಲಕವಿಟ್ಟು ಸ್ವಾಗತಿಸಲಾಯಿತು. ವಿದ್ಯಾರ್ಥಿಗಳು ಭಾರತಮಾತೆಗೆ ಪುಷ್ಪಾರ್ಚನೆ ಮಾಡಿ,ಪಾಲಕರಿಂದ ಅಕ್ಷತೆ ಹಾಕಿಸಿಕೊಂಡು ಆಶೀರ್ವಾದ ಪಡೆದುಕೊಂಡರು. ೨೦೨೩-೨೪ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೧೦೦ ಫಲಿತಾಂಶ ಪಡೆದ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಶ್ರೀರಾಮಚಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿಯ ಸದಸ್ಯ ಮಲ್ಯ ಶಂಕರ ನಾರಾಯಣ ಭಟ್, ಪ್ರೌಢಶಾಲಾ ಮುಖ್ಯಶಿಕ್ಷಕಿ ರಜನಿ ಉಪಸ್ಥಿತರಿದ್ದರು.
ವಿದ್ಯಾಕೇಂದ್ರದ ಅಧ್ಯಕ್ಷ ಜಯಶ್ಯಾಂ ನೀರ್ಕಜೆ ಸ್ವಾಗತಿಸಿದರು. ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಲೋಕೇಶ್ ಎಸ್. ವಂದಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕಿ ಶ್ವೇತ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.
ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕು. ಶಕ್ತಿ ಮತ್ತು ಕೊರತೆಯನ್ನು ಅರ್ಥ ಮಾಡಿಕೊಂಡು ಸಾಧನೆಗೆ ತೊಡಗಬೇಕು.
| ಮಹೇಶ್ ಬಿ, ಎಂ.ಆರ್.ಪಿ.ಎಲ್. ಅಽಕಾರಿ