

ಮೂಲ್ಕಿ: ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಆರು ದಶಕಗಳಿಂದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ವಿಚಾರಗಳಲ್ಲಿ ಅವಿಭಜಿತ ದ.ಕ. ಜಿಲ್ಲೆ ಮತ್ತು ಕಾಸರಗೋಡು ಜಿಲ್ಲೆಯಲ್ಲದೆ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ರಾಜ್ಯಮಟ್ಟದಲ್ಲಿ ಅಸಾಮಾನ್ಯ ಕೊಡುಗೆ ನೀಡಿದ್ದಾರೆ. ಅವರ ಸನ್ಮಾನ ಮತ್ತು ಬಿರುದು ಪ್ರದಾನ ಕಾರ್ಯಕ್ರಮ ಅತ್ಯಂತ ಸೂಕ್ತ ನಿರ್ಧಾರ ಎಂದು ಮೂಲ್ಕಿ ಸೀಮೆ ಅರಸ ದುಗ್ಗಣ್ಣ ಸಾವಂತರು ಹೇಳಿದರು.
ಕ.ಸಾ.ಪ. ಮಾಜಿ ಅಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಅವರಿಗೆ ಮಂಗಳೂರಿನ ಪಿಲಿಕುಲದ ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಭವನದಲ್ಲಿ ನಡೆಯುವ ಸಾರ್ವಜನಿಕ ಅಭಿವಂದನಾ ಹಾಗೂ ಕರ್ಮ ಯೋಗಿ ಬಿರುದು ಪ್ರದಾನ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್, ಯುಗಪುರುಷದ ಕೆ.ಭುವನಾಭಿರಾಮ ಉಡುಪ, ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ನಾಗೇಶ್ ಬಪ್ಪನಾಡು ಮುಂತಾದವರು ಮಾತನಾಡಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ನಿತ್ಯಾನಂದ ರಾವ್ ಪ್ರಸ್ತಾವಿಸಿದರು. ಸಹಕಾರ್ಯದರ್ಶಿ ಎಂ.ಸರ್ವೋತ್ತಮ ಅಂಚನ್ ಸ್ವಾಗತಿಸಿದರು. ಸುನೀಲ್ ಆಳ್ವ ವಂದಿಸಿದರು