ನಿಸ್ವಾರ್ಥ ಸೇವೆ ಮೂಲಕ ಜನಮನ ಗೆದ್ದ ಪುನೀತ್

ಗಂಗಾವತಿ ತಾಲೂಕಿನ ಶ್ರೀರಾಮನಗರದ ಚಿತ್ರನಟ ದಿ.ಪುನೀತ್ ರಾಜಕುಮಾರ ವೃತ್ತದ ಬಳಿ ಪುನೀತ್ ರಾಜಕುಮಾರ 4ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ, ಗ್ರಾಪಂ ಅಧ್ಯಕ್ಷ ಶಾಂತಪ್ಪ, ಸದಸ್ಯ ಮಹೆಬೂಬ್ ಇತರರಿದ್ದರು.

Published on

ಗಂಗಾವತಿ: ಚಿತ್ರನಟ ಪುನೀತ್ ರಾಜಕುಮಾರ ಅವರ ಸಮಾಜಮುಖಿ ಕಾರ್ಯಗಳು ಪ್ರತಿಯೊಬ್ಬರಿಗೂ ಆದರ್ಶ. ನಿಸ್ವಾರ್ಥ ಸೇವೆ ಮೂಲಕ ಜನಮನ ಗೆದ್ದಿದ್ದಾರೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.

ತಾಲೂಕಿನ ಶ್ರೀರಾಮನಗರದ ಚಿತ್ರನಟ ದಿ.ಪುನೀತ್ ರಾಜಕುಮಾರ ವೃತ್ತದ ಬಳಿ ಕರ್ನಾಟಕ ರತ್ನ ಪವರ್‌ಸ್ಟಾರ್ ಪುನೀತ್ ರಾಜಕುಮಾರ ೌಂಡೇಶನ್ ಮತ್ತು ಅಭಿಮಾನಿ ಬಳಗದಿಂದ ಬುಧವಾರ ಹಮ್ಮಿಕೊಂಡಿದ್ದ ಪುನೀತ್ ರಾಜಕುಮಾರ ಅವರ 4ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಮೆಗೆ ಪುಷ್ಪಾರ್ಪಣೆ, ಪೂಜೆ ಸಲ್ಲಿಸಲಾಯಿತು. ನಂತರ ಸಾರ್ವಜನಿಕರಿಗೆ ಉಪಹಾರ ಮತ್ತು ಭೋಜನ ವ್ಯವಸ್ಥೆ ಮಾಡಲಾಗಿತ್ತು. ಸ್ಥಳೀಯ ಕಲಾವಿದರಿಂದ ಗಾಯನದ ಮೂಲಕ ನುಡಿನಮನ ಸಲ್ಲಿಸಲಾಯಿತು.

ಗುತ್ತಿಗೆದಾರ ಜಿ.ಹರಿಬಾಬು, ಪಿಎಸ್ಸೆಸ್ಸೆನ್ ಮಾಜಿ ಅಧ್ಯಕ್ಷ ಜಿ.ರಾಮಕೃಷ್ಣ, ಗ್ರಾಪಂ ಅಧ್ಯಕ್ಷ ಶಾಂತಪ್ಪ, ಸದಸ್ಯರಾದ ಮಹೆಬೂಬ್, ಪಿಡಿಒ ನಾಗೇಶ ಕುರ್ಡಿ, ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ, ಲಯನ್ಸ್ ಕ್ಲಬ್ ತಾಲೂಕಾಧ್ಯಕ್ಷ ಕೆ.ಸುಬ್ರಮಣ್ಯೇಶ್ವರರಾವ್, ಪಶು ಸಂಗೋಪನೆ ಇಲಾಖೆ ವೈದ್ಯಾಧಿಕಾರಿ ಕೊಂಡಯ್ಯ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಸರ್ದಾರ್‌ಅಲಿ, ಪ್ರಮುಖರಾದ ಮಂಜುನಾಥ ಮರಳಿ, ಎಂ.ಜೆ.ರವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net