17ರಂದು ಸಾಲಗಾಮೆಯಲ್ಲಿ ಪುನೀತ್ ಉತ್ಸವ

punith jan 24 2020
Published on

ಹಾಸನ: ಡಿ.ಪಿ ಚಂದ್ರಶೇಖರ್ ಅಭಿಮಾನಿಗಳ ಬಳಗದ ವತಿಯಿಂದ ಮಾರ್ಚ್ 17 ರಂದು ದಿ. ಡಾ. ಪುನೀತ್ ರಾಜ್ ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಪುನೀತ್ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಪ್ರದೀಪ್ ತಿಳಿಸಿದರು.

ತಾಲೂಕಿನ ಸಾಲಗಾಮೆ ಸಂತೆ ಮೈದಾನದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ನೇತ್ರದಾನ, ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಆರೋಗ್ಯ ತಪಾಸಣೆಯಲ್ಲಿ ಹೆಸರಾಂತ ಆಸ್ಪತ್ರೆಗಳ ವೈದ್ಯರು ಭಾಗವಹಿಸಲಿವೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇದಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಆದೆ ದಿನ ಸಂಜೆ ಖ್ಯಾತ ನಿರೂಪಕ ಮತ್ತು ನಟರಾದ ಶ್ಯಾಂ ಅವರು ಅರ್ಪಿಸುವ ಮಿಲನ್ ಮ್ಯೂಸಿಕಲ್ ಸೆಲೆಬ್ರೇಷನ್ ಸ್ಟಾರ್ ನೈಟ್ ಇವರಿಂದ ಸಂಗೀತಾ ಮತ್ತು ಮನೋರಂಜನೆ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಶ್ರೇಯಸ್ ಪಟೇಲ್ ಭಾಗವಹಿಸಲಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಸಮಾಜ ಸೇವಕ ಡಿ.ಪಿ. ಚಂದ್ರಶೇಖರ್ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಅಭಿಮಾನಿ ಬಳಗದ ಪದಾಧಿಕಾರಿಗಳಾದ ಸಂತೋಷ್, ದರ್ಶನ್, ದಿನೇಶ, ಚಿರತ್, ಅಭಿಲಾಶ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net