ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬ ಅಂಗವಾಗಿ ತುಕ್ಕಾನಟ್ಟಿ ಗ್ರಾಮದ 60 ಜನರಿಂದ ನೇತ್ರದಾನ

dtstdrt
Published on

ಬೆಳಗಾವಿ: ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಗುರುನಾಥ ಉಪ್ಪಾರ್ ಅವರ ನೇತೃತ್ವ ಮತ್ತು ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಹಾಗೂ ಅಮ್ಮ ಪ್ರತಿಷ್ಠಾನದ ಆಶ್ರಯದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ನಗರದ ಕೆಎಲ್ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರಕ್ಕೆ 66 ಜನರು ಮರಣಾ ನಂತರದಲ್ಲಿ ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡಲು ಮುಂದೆ ಬಂದಿದ್ದಾರೆ.

ಇದೇ ಸಂದರ್ಭದಲ್ಲಿ ಕೆಎಲ್ಇ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಕೆ ಆಯುರ್ವೇದ ಮಹಾವಿದ್ಯಾಲಯದ ರಚನಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ.ಮಹಾಂತೇಶ ರಾಮಣ್ಣವರ ಅವರು ನೇತ್ರದಾನದ ಮಹತ್ವ ಹಾಗೂ ಅದರ ಉಪಯುಕ್ತತೆ ಬಗ್ಗೆ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಉಪ್ಪಾರ ಯುವಕ ಸಂಘದ ಗೌರವ ಅಧ್ಯಕ್ಷ ಭರಮಣ್ಣ ಲಕ್ಷ್ಮಣ ಉಪ್ಪಾರ, ಗುರುನಾಥ್ ಉಪ್ಪಾರ್, ಸೀಮಾ ಗುರುನಾಥ್ ಉಪ್ಪಾರ್, ಅಮ್ಮ ಪ್ರತಿಷ್ಠಾನದ ಅಧ್ಯಕ್ಷ ಬಾಳಾಸಾಹೇಬ ಉದಗಟ್ಟಿ, ಡಾ. ತುಕಾರಾಮ ಉಮರಾಣಿ, ಶಿವಕುಮಾರ ಬೆನಕನಕೊಂಡ, ಪುಂಡಲಿಕ್ ಕೊಡ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net