

ಚಾಮರಾಜನಗರ: ರಾಜ್ಯದ ಗಡಿ ಜಿಲ್ಲೆಯಾದ ಚಾಮರಾಜನಗರದ ಜಿಲ್ಲಾ ಅಭಿವೃದ್ಧಿ ರಾಯಭಾರಿಯಾಗಲು ನಟ ಪುನೀತ್ ರಾಜ್ಕುಮಾರ್ ಅವರು ಸಮ್ಮತಿಸಿದ್ದಾರೆ.
ಪುನೀತ್ ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿರುವುದರಿಂದ ರಾಯಭಾರಿಯಾಗಲು ಖುಷಿಯಿಂದಲೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಪ್ರಾಥಮಿಕ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಪುನೀತ್ ಅವರನ್ನು ಆಹ್ವಾನಿಸಲು ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಅವರ ನಿವಾಸಕ್ಕೆ ತೆರಳಿದ್ದಾರೆ.
ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಪುನೀತ್ ನಿವಾಸಕ್ಕೆ ಭೇಟಿ ನೀಡಿ ಆಹ್ವಾನಿಸಲಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯನ್ನು ಹೊರಡಿಸಿದೆ.