ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ

8-hvr-01
Published on

ಹಾವೇರಿ: ಉತ್ತರಪ್ರದೇಶದ ಹಾಥರಸ್​ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ ಹಾಗೂ ಸಾಮಾಜಿಕ ಪರಿವರ್ತನ ಜನಾಂದೋಲನ ಸಮಿತಿಯಿಂದ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಒಕ್ಕೂಟದ ಕಾರ್ಯದರ್ಶಿ ಎಸ್.ಎಚ್. ಮಜೀದ ಮಾತನಾಡಿ, ದೇಶಾದ್ಯಂತ ವಿದ್ಯಾರ್ಥಿನಿಯರ ಮತ್ತು ಮಹಿಳೆಯರ, ಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ಹಾಗೂ ಕ್ರೌರ್ಯದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದನ್ನು ತಡೆಯುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಂಬಂಧಿಸಿದ ಇಲಾಖೆಗಳು ಸೂಕ್ತ ಕ್ರಮ ವಹಿಸಬೇಕು. ನಾಗರಿಕ ಸಮಾಜ ತಲೆ ತಗ್ಗಿಸುವಂಥ ಪ್ರಕರಣ ಉತ್ತರಪ್ರದೇಶದ ಹಾಥರಸ್​ನಲ್ಲಿ ನಡೆದಿದೆ. ಹೀಗಾಗಿ ಉತ್ತರಪ್ರದೇಶ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಯುವತಿಯ ಕುಟುಂಬಕ್ಕೆ ಪರಿಹಾರ ಒದಗಿಸಬೇಕು ಎಂದರು.

ಸಾಮಾಜಿಕ ಕಾರ್ಯಕರ್ತೆ ಗೀತಾ ಪಾಟೀಲ, ಸಾಮಾಜಿಕ ಪರಿವರ್ತನಾ ಜನಾಂದೋಲನದ ಸಂಚಾಲಕಿ ಹಸಿನಾ ಹೆಡಿಯಾಲ, ಒಕ್ಕೂಟದ ಖಜಾಂಚಿ ಮುತ್ತುರಾಜ ಮಾದರ, ಎಚ್.ಎಫ್. ಅಕ್ಕಿ ಹಾಗೂ ಸ್ವಯಂ ಸೇವಾಸಂಸ್ಥೆಯ ಪ್ರತಿನಿಧಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net