

ಉಡುಪಿ: ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಏಳು ವರ್ಷದ ಹಿಂದೆ ದಾಖಲಾಗಿದ್ದ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ನೀಡಿರುವ ನ್ಯಾಯಾಲಯ ಅಪರಾಧಿಗೆ 1 ವರ್ಷ ಕಠಿಣ ಸಜೆ ಮತ್ತು 30 ಸಾವಿರ ರೂ. ದಂಡ ವಿಧಿಸಿದೆ.
ಕೋಟತಟ್ಟು ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಪ್ಪಲ್ಪುರ ನಿವಾಸಿ ಭೀಮಶಂಕರ ಅಳಗಿ ಶಿೆಗೊಳಗಾದವನು. 2016 ರ ಜು. 11 ರಂದು ಚಿತ್ರಪಾಡಿ ಗ್ರಾಮದ ಮಾರಿಯಮ್ಮ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಭೀಮಶಂಕರ ಅಳಗಿ ಕೈಯಲ್ಲಿ ಚೀಲವನ್ನು ಹಿಡಿದುಕೊಂಡು ನಡೆದುಕೊಂಡು ಬರುತ್ತಿದ್ದು, ಚೀಲವನ್ನು ಪರಿಶೀಲಿಸಿದಾಗ 1 ಕೆ.ಜಿ 700 ಗ್ರಾಂ ಗಾಂಜಾ ಪತ್ತೆಯಾಗಿತ್ತು. ಕೋಟ ಮತ್ತು ಕುಂದಾಪುರ ಕಡೆಗಳಲ್ಲಿ ಇವುಗಳನ್ನು ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿರುವುದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದ.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ್ ಶಿವಪ್ಪ ಅಪರಾಧ ಸಬೀತಾಗಿರುವುದರಿಂದ ಅಪರಾಧಿಗೆ ಶಿೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಜಯರಾಮ ಶೆಟ್ಟಿ ವಾದ ಮಂಡಿಸಿದ್ದಾರೆ.