ಪಿರಿಯಾಪಟ್ಟಣ: ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಟ್ಟಣದ ಕಿರಿಯ ಶ್ರೇಣಿ ನ್ಯಾಯಾಲಯವು ಅಪರಾಧಿಗೆ ಒಂದು ವರ್ಷ ಸಜೆ ಹಾಗೂ 11,500 ರೂ.ದಂಡ ವಿಧಿಸಿ ಇತ್ತೀಚೆಗೆ ತೀರ್ಪು ನೀಡಿದೆ.
ತಾಲೂಕಿನ ಬೆಟ್ಟದಪುರ ಗ್ರಾಮದ ಕುಮಾರ್ ಶಿಕ್ಷೆಗೆ ಗುರಿಯಾದವನು. 2016ರಲ್ಲಿ ಬೆಟ್ಟದಪುರ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಬೆಟ್ಟದಪುರ ಪೊಲೀಸರು ಪಿರಿಯಾಪಟ್ಟಣದ ಕಿರಿಯ ಶ್ರೇಣಿ ಹೆಚ್ಚುವರಿ ನ್ಯಾಯಾಲಯದಲ್ಲಿ ಆರೋಪಿ ಕುಮಾರ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶರಾದ ಶ್ವೇತಾ ಅವರು ತೀರ್ಪು ಪ್ರಕಟಿಸಿದ್ದು, ಸರ್ಕಾರಿ ಸಹಾಯಕ ಅಭಿಯೋಜಕ ಶಿವಪ್ರಕಾಶ್ ಗಾವಂಕರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದಾರೆ.