ಅಸ್ಪೃಷ್ಯತೆ ಆಚರಿಸಿದರೆ ಶಿಕ್ಷೆ

ಅಸ್ಪೃಷ್ಯತೆ ಆಚರಿಸಿದರೆ ಶಿಕ್ಷೆ
Published on

ಗುಂಡ್ಲುಪೇಟೆ: ಕಾನೂನಿನ ಪ್ರಕಾರ ಎಲ್ಲರೂ ಸಮಾನರಾಗಿದ್ದು ಅಸ್ಪೃಷ್ಯತೆ ಆಚರಣೆ ಮಾಡುವವರಿಗೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ತಹಸೀಲ್ದಾರ್ ಟಿ.ರಮೇಶ್ ಬಾಬು ಎಚ್ಚರಿಸಿದರು.

ತಾಲೂಕಿನ ಬೇಗೂರು ಗ್ರಾಮದಲ್ಲಿ ಸೋಮವಾರ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಅಸ್ಪೃಷ್ಯತೆ ನಿರ್ಮೂಲನೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದ್ದು, ಅಸ್ಪೃಷ್ಯತೆ ನಿರ್ಮೂಲನೆಗೆ ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ಸಂತ್ರಸ್ಥರು ದೂರು ನೀಡಿದರೆ ಅಂತಹವರ ವಿರುದ್ಧ ನಾಗರಿಕ ಹಕ್ಕುಗಳ ಸಂರಕ್ಷಣಾ ಕಾಯ್ದೆ ಹಾಗೂ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮದಂತೆ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಬಗ್ಗೆ ಸರ್ಕಾರ ಹೆಚ್ಚಿನ ಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಗ್ರಾಮಪಂಚಾಯಿತಿ ಅಧ್ಯಕ್ಷೆ ಜಯಮ್ಮ, ನಾಡಕಚೇರಿಯ ಗ್ರಾಮಾಧಿಕಾರಿ ಮಹದೇವಪ್ಪ, ರಾಘವಾಪುರ ಗ್ರಾಮಪಂಚಾಯಿತಿ ಅಧ್ಯಕ್ಷ ಉಲ್ಲಾಸ್, ವಕೀಲೆ ನೀಲಾಂಬಿಕೆ, ಮುಖಂಡ ಸುಭಾಷ್ ಮಾಡ್ರಹಳ್ಳಿ, ಸೋಮಣ್ಣ, ಸೋಮಹಳ್ಳಿ ರವಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net