ಶ್ರೀರಂಗಪಟ್ಟಣ: ಪತ್ನಿಗೆ ವರದಕ್ಷಿಣಿ ಕಿರುಕುಳ ನೀಡಿ ಆಕೆಯ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಪತಿಗೆ 10 ಸಾವಿರ ರೂ. ದಂಡ ವಿಧಿಸುವ ಜತೆಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.
ತಾಲೂಕಿನ ಅರಕೆರೆ ಗ್ರಾಮದ ನಿವಾಸಿ ಲೋಕೇಶ್ ಶಿಕ್ಷೆಗೆ ಗುರಿಯಾದವನು. 2017ರಲ್ಲಿ ಲೋಕೇಶ್ ತನ್ನ ಪತ್ನಿಗೆ ಕಿರುಕುಳ ಹಾಗೂ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಪತ್ನಿ ಅರಕೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿ ಪ್ರಕರಣ ದಾಖಲಿಸಿಕೊಂಡ ಆಗಿನ ಠಾಣಾಧಿಕಾರಿ ಅಜರುದ್ದೀನ್ ಅವರು ನ್ಯಾಯಾಲಯಕ್ಕೆ ಲೋಕೇಶ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧ ವಿರುದ್ದ ಸರ್ಕಾರಿ ಅಭಿಯೋಜಕರಾದ ಎಂ.ಕೆ.ಪ್ರಪುಲ್ಲಾ ಅವರು ವಾದ ಮಂಡಿಸಿದ್ದರು. ವಾದ-ವಿವಾದ ಆಲಿಸಿದ ನ್ಯಾಯಾಧೀಶರಾದ ಗೋಪಾಲಕೃಷ್ಣ ರೈ ಅವರು ಶಿಕ್ಷೆ ಪ್ರಕಟಿಸಿದ್ದಾರೆ.