ಮಹಿಳೆ ಮಾನಹಾನಿಗೆ ಯತ್ನಿಸಿದವರಿಗೆ ಶಿಕ್ಷೆ

udp-8-court
Published on

ಉಡುಪಿ: ಮಹಿಳೆಯೊಬ್ಬರು ಸಹೋದ್ಯೋಗಿಯೊಂದಿಗೆ ಸಲುಗೆಯಿಂದ ಸಂದರ್ಭದಲ್ಲಿ ಮೊಬೈಲ್ನಲ್ಲಿ ಚಿತ್ರ ತೆಗೆದು ಬ್ಲಾಕ್ಮೇಲ್​ ಮಾಡುತ್ತಿದ್ದ ಆರೋಪಿಗೆ 3 ವರ್ಷ ಜೈಲು ಶಿಕ್ಷೆ ನೀಡಿ ನಗರದ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್​.ಸಿ. ನ್ಯಾಯಾಲಯ ಅದೇಶಿಸಿದೆ.

ಬೈಕಾಡಿ ಗ್ರಾಮದ ಗೋಪಾಲ ಹಾಗೂ ಪುತ್ತೂರು ಗ್ರಾಮದ ಬಾಲಕೃಷ್ಣ ಅಪರಾಧಿಗಳು. ಇವರಿಬ್ಬರೂ ಮಹಿಳೆಗೆ ಲೈಂಗಿಕ ಬೇಡಿಕೆ ಇಡುತ್ತಿದ್ದು, ಇದಕ್ಕೆ ಒಪ್ಪದಿದ್ದಾಗ ಆರೋಪಿ ಗೋಪಾಲ ಊರಿನಲ್ಲಿ ಅಶ್ಲೀಲ ಛಾಯಾಚಿತ್ರಗಳನ್ನು ತೋರಿಸಿ ಅವರ ಮಾನಕ್ಕೆ ಧಕ್ಕೆಯನ್ನು ಉಂಟು ಮಾಡಿದ್ದ. 2014ರಂದು ಈ ಇಬ್ಬರೂ ಮಹಿಳೆಯ ಮನೆಯ ಸಮೀಪ ಬಾವಿಕಟ್ಟೆಯ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ತಡೆದು ನಿಲ್ಲಿಸಿ, ಲೈಂಗಿಕ ಕಿರುಕುಳ ನೀಡಿದ್ದರು. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಆರೋಪಿತರ ಪೈಕಿ 1ನೇ ಆರೋಪಿ ಗೋಪಾಲ ಮೃತಪಟ್ಟಿದ್ದು, ಬಾಲಕೃಷ್ಣ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಶ್ಯಾಮ್​ ಪ್ರಕಾಶ್​ ಅವರು ಬಾಲಕೃಷ್ಣನಿಗೆ 3 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ, ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದ್ದು, ಮಮ್ತಾಜ್​ ಸಾಕ್ಷಿ ವಿಚಾರಣೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net