

ಹುಬ್ಬಳ್ಳಿ: ಇಲ್ಲಿಯ ಶ್ರೀ ಜಗದ್ಗುರು ಪಂಚಾಚಾರ್ಯ ಪುಣ್ಯಾಶ್ರಮ ಶ್ರೀಶೈಲ ಮಠದಲ್ಲಿ ಶಿವರಾತ್ರಿ ನಿಮಿತ್ತ ಬುಧವಾರ ಶಿವಲಿಂಗ ಮೂರ್ತಿ ಹಾಗೂ ಶ್ರೀ ಜಗದ್ಗುರು ಪಂಡಿತಾರಾಧ್ಯ ಮೂರ್ತಿಗಳಿಗೆ ಮಹಾರುದ್ರಾಭಿಷೇಕ ನೆರವೇರಿಸಲಾಯಿತು.
ಶ್ರೀ ಪಂಚಾಚಾರ್ಯ ಪುಣ್ಯಾಶ್ರಮ ಸೇವಾ ಸಮಿತಿ ಕಾರ್ಯದರ್ಶಿ ಪ್ರಕಾಶ ಬೆಂಡಿಗೇರಿ, ವೇದಮೂರ್ತಿ ರಾಜಶೇಖರಯ್ಯ ಚಿಕ್ಕಮಠ, ಸಂಗಪ್ಪ ಸಣ್ಣಕ್ಕಿ, ನೂರಾರು ಮಹಿಳೆಯರು, ಭಕ್ತರು ಪಾಲ್ಗೊಂಡಿದ್ದರು. ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.