

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಪ್ರತಿಭಾ ಪ್ರತಿಷ್ಠಾನ ವತಿಯಿಂದ ನಗರದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಗಣ್ಯರಿಗೆ ಗೌರವಾರ್ಪಣೆ ಸಮಾರಂಭವನ್ನು ಆ. 11ರಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ಆಲೂರು ವೆಂಕಟರಾವ್ ಸಭಾಭವನದಲ್ಲಿ ಏರ್ಪಡಿಸಲಾಗಿದೆ.
ಅತಿಥಿಗಳಾಗಿ ಐಐಟಿ ನಿರ್ದೇಶಕ ಡಾ. ವೆಂಕಪ್ಪಯ್ಯ ದೇಸಾಯಿ, ನಿವೃತ್ತ ಮುಖ್ಯಾಧ್ಯಾಪಕ ವಾದಿರಾಜ ಕಾಥೋಟಿ ಆಗಮಿಸುವರು. ಶ್ರೀನಿವಾಸ ಪರಾಂಡೆ , ಅಶೋಕ ಹುದ್ದಾರ, ರವಿಪ್ರಸಾದ ಕೆ. ಮತ್ತು ಪಂ. ಪ್ರಮೋದ ಚಂದಿ ಅವರನ್ನು ಸನ್ಮಾನಿಸಲಾಗುವುದು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿಪ್ರ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು. ಪ್ರತಿಷ್ಠಾನದ ಅಧ್ಯಕ್ಷ ಪ್ರಹ್ಲಾದ ನರಸಾಪುರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವೆಂಕಟೇಶ ದೇಸಾಯಿ ತಿಳಿಸಿದ್ದಾರೆ.