ಸಾಧಕರಿಗೆ ಗೊಂಬೆಯಾಟ ಅಕಾಡೆಮಿ ಸನ್ಮಾನ

gan (19)
Published on

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದ ಪ್ರಯುಕ್ತ ಭಾನುವಾರ ಆಯೋಜನೆಗೊಂಡ 109ನೇ ತಿಂಗಳ ಕಾರ್ಯಕ್ರಮದಲ್ಲಿ ಮನ್ವಿತಾ ಎಸ್., ಶ್ರೀಮತಿ ಶೇಖರ್ ಹಾಗೂ 2024-25ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಉಪ್ಪಿನಕುದ್ರು ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿ ಸಮೀಕ್ಷಾ ಅವರನ್ನು ಸನ್ಮಾನಿಸಲಾಯಿತು.

ನಿವೃತ್ತ ಪ್ರಾಂಶುಪಾಲ ಎಂ.ರತ್ನಾಕರ ಪೈ, ವಸಂತಿ ಪಂಡಿತ್, ಸೂರ್ಯಕಾಂತ್, ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು. ಕುಂದೇಶ್ವರದ ಏಕನಾಥೇಶ್ವರಿ ಭಜನಾ ಮಂಡಳಿ ಸದಸ್ಯರಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಜರುಗಿತು. ನಾಗೇಶ್ ಶ್ಯಾನುಭಾಗ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net